ಜೆ ಪಿ ನಡ್ಡಾ 
ದೇಶ

'ಒಂದು ರಾಷ್ಟ್ರ, ಒಂದು ಚುನಾವಣೆ': ಸಮಿತಿ ರಚನೆ ಬೆನ್ನಲ್ಲೇ ಮಾಜಿ ರಾಷ್ಟ್ರಪತಿ ಕೋವಿಂದ್ ಭೇಟಿ ಮಾಡಿದ ಜೆ ಪಿ ನಡ್ಡಾ

"ಒಂದು ರಾಷ್ಟ್ರ, ಒಂದು ಚುನಾವಣೆ"ಯ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಸಮಿತಿಯ ನೇತೃತ್ವದ ಜವಾಬ್ದಾರಿಯನ್ನು ವಹಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಶುಕ್ರವಾರ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು.

ನವದೆಹಲಿ: "ಒಂದು ರಾಷ್ಟ್ರ, ಒಂದು ಚುನಾವಣೆ"ಯ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಸಮಿತಿಯ ನೇತೃತ್ವದ ಜವಾಬ್ದಾರಿಯನ್ನು ವಹಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಶುಕ್ರವಾರ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು.

ನಡ್ಡಾ ಅವರು ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿರುವ ಕೋವಿಂದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಅವರಿಬ್ಬರ ಭೇಟಿ, ಮಾತುಕತೆಯ ವಿವರಗಳು ಲಭ್ಯವಾಗಿಲ್ಲ. 1967 ರವರೆಗೆ ದೇಶದಲ್ಲಿ ಇದ್ದಂತೆ ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳಿಗೆ ಹೇಗೆ ಹೊಂದಿಸಬಹುದು ಎಂಬುದರ ಕಾರ್ಯಸಾಧ್ಯತೆ ಮತ್ತು ಕಾರ್ಯವಿಧಾನವನ್ನು ಅನ್ವೇಷಿಸಲಿದ್ದಾರೆ.

2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಳಗೊಂಡಿರುವ ಏಕಕಾಲಿಕ ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಾ ಬಂದಿದ್ದಾರೆ. ದೇಶದಲ್ಲಿ ನಿರಂತರ ಚುನಾವಣೆಯಿಂದ ಆರ್ಥಿಕ ಹೊರೆ ಮತ್ತು ಮತದಾನದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕುಂಠಿತವಾಗಿದೆ. 2017 ರಲ್ಲಿ ರಾಷ್ಟ್ರಪತಿಯಾದ ನಂತರ ರಾಮನಾಥ್ ಕೋವಿಂದ್ ಕೂಡ ಮೋದಿಯವರ ಅಭಿಪ್ರಾಯಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದರು.

2018ರಲ್ಲಿ ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಮಾತನಾಡಿದ್ದ ಅವರು, ಆಗಾಗ್ಗೆ ಚುನಾವಣೆಗಳು ಮಾನವ ಸಂಪನ್ಮೂಲಗಳ ಮೇಲೆ ಭಾರಿ ಹೊರೆಯನ್ನು ಹೇರುವುದಲ್ಲದೆ, ಮಾದರಿ ನೀತಿ ಸಂಹಿತೆಯ ಘೋಷಣೆಯಿಂದಾಗಿ ಅಭಿವೃದ್ಧಿ ಪ್ರಕ್ರಿಯೆಗೆ ಅಡ್ಡಿಯಾಗುತ್ತವೆ ಎಂದು ಹೇಳಿದ್ದರು. ಮೋದಿಯವರಂತೆ ಅವರು ಕೂಡ ಈ ವಿಷಯದಲ್ಲಿ ನಿರಂತರ ಚರ್ಚೆಗೆ ಕರೆ ನೀಡಿದ್ದರು. ಈ ವಿಷಯದ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT