ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ನೇತ್ರ ಚಿಕಿತ್ಸಾ ಕೇಂದ್ರಕ್ಕೆ ರಾಹುಲ್ ಗಾಂಧಿ ಭೇಟಿ
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಬೆಳಗ್ಗೆ ಸಭೆಗೆ ತೆರಳುವ ಮುನ್ನ ತಪಾಸಣೆಗಾಗಿ ಇಲ್ಲಿನ ನೇತ್ರ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಬೆಳಗ್ಗೆ ಸಭೆಗೆ ತೆರಳುವ ಮುನ್ನ ತಪಾಸಣೆಗಾಗಿ ಇಲ್ಲಿನ ನೇತ್ರ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರು ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ದಕ್ಷಿಣ ಮುಂಬೈನ ಪೆಡ್ಡರ್ ರಸ್ತೆಯ ರಷ್ಯನ್ ಕಲ್ಚರ್ ಸೆಂಟರ್ ಬಳಿ ಇರುವ ಬನಾಜಿ ಐಕೇರ್ಗೆ ಬೆಳಿಗ್ಗೆ 8.35ಕ್ಕೆ ಭೇಟಿ ನೀಡಿದರು ಮತ್ತು ಬೆಳಿಗ್ಗೆ 10ರ ಸುಮಾರಿಗೆ ಅಲ್ಲಿಂದ ಹೊರಟರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿಕೂಟದ ಸಭೆಗೆ ಹಾಜರಾಗುವ ಮುನ್ನ ಕಾಂಗ್ರೆಸ್ ನಾಯಕ ನೇತ್ರ ಚಿಕಿತ್ಸಾ ಕೇಂದ್ರದ ವೈದ್ಯಕೀಯ ನಿರ್ದೇಶಕರನ್ನು ಭೇಟಿ ಮಾಡಿ ಅಲ್ಲಿ ತಪಾಸಣೆಗೆ ಒಳಗಾದರು ಎಂದು ಅವರು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.