ಸುಪ್ರೀಂ ಕೋರ್ಟ್ 
ದೇಶ

1995 ಜೋಡಿ ಕೊಲೆ ಪ್ರಕರಣ: ಬಿಹಾರ ಮಾಜಿ ಸಂಸದ ಪ್ರಭುನಾಥ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ

1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ನವದೆಹಲಿ: 1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಭುನಾಥ್ ಸಿಂಗ್ ಮಹಾರಾಜ್‌ಗಂಜ್ ಅನ್ನು ಜೆಡಿಯು ಮತ್ತು ಆರ್‌ಜೆಡಿ ಸಂಸದರಾಗಿ ಪ್ರತಿನಿಧಿಸಿದ್ದರು. ಮಹಾರಾಜ್‌ಗಂಜ್‌ ನಿಂದ ಹಲವು ಬಾರಿ ಆರಿಸಿ ಬಂದಿದ್ದರು. ಜೋಡಿ ಕೊಲೆ ಪ್ರಕರಣದಲ್ಲಿ ಪ್ರಭುನಾಥ್ ಸಿಂಗ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯ ಮತ್ತು ಪಾಟ್ನಾ ಹೈಕೋರ್ಟ್‌ನ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಆಗಸ್ಟ್ 18 ರಂದು ರದ್ದುಗೊಳಿಸಿತ್ತು.

ವಿಚಾರಣಾ ನ್ಯಾಯಾಲಯ ಮತ್ತು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಆಗಸ್ಟ್ 18ರಂದು ರದ್ದು ಮಾಡಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ, ವಿಕ್ರಮ್ ನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ, ಪ್ರಭುನಾಥ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣದ ಮೇಲಿನ ವಾದಗಳನ್ನು ಆಲಿಸಿದ ಪೀಠವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನುವಿಧಿಸಿತು.

ಮಾರ್ಚ್ 1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.

ಬಿಹಾರದ ಮಹಾರಾಜ್ ಗಂಜ್‌ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡುವ ಸಂದರ್ಭ ಸುಪ್ರೀಂ ಕೋರ್ಟ್, ಸಿಂಗ್ ಅವರು ತಮ್ಮ ವಿರುದ್ಧದ ಸಾಕ್ಷ್ಯ ನಾಶ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT