ದೇಶ

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್

Srinivasamurthy VN

ನವದೆಹಲಿ: ಕೇಂದ್ರದ ಬಿಜೆಪಿ ಎನ್ ಡಿಎ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರದ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾಪವನ್ನು ಶುಕ್ರವಾರ ಟೀಕಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಅಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಯಾವುದೇ ಪ್ರಾಯೋಗಿಕ ಮಾರ್ಗವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಣದುಬ್ಬರ, ವಿರೋಧ ಪಕ್ಷಗಳ ಒಗ್ಗಟ್ಟಿನ ಹೊರತಾಗಿಯೂ 2024ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ: ವರದಿ
  
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಂತರ ತಮ್ಮ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಮೊದಲ ಭೇಟಿಯಲ್ಲಿ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ಸರ್ಕಾರದ 'ಒಂದು ರಾಷ್ಟ್ರ, ಒಂದು ಚುನಾವಣೆ' ಉಪಕ್ರಮವು ಸಂಸದೀಯ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ವ್ಯವಸ್ಥೆಗೆ ವಿರುದ್ಧವಾಗಿರುತ್ತದೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಪಕ್ಷಗಳು ಬಹುಮತವನ್ನು ಕಳೆದುಕೊಂಡರೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ನೀವು ಅಂತಹ ವ್ಯವಸ್ಥೆಯನ್ನು ಕಾರ್ಯಗತಗೊಳಿಸಲು ಯಾವುದೇ ಪ್ರಾಯೋಗಿಕ ಮಾರ್ಗವಿಲ್ಲ ಎಂದು ಕಿಡಿಕಾರಿದ್ದಾರೆ.

ನಿನ್ನೆಯಷ್ಚೇ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕಗಳನ್ನು ಅರಿಯಲು ಮಾಜಿ ರಾಷ್ಚ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿ ರಚನೆ ಮಾಡಿದೆ.

SCROLL FOR NEXT