ಆದಿತ್ಯಾ ಎಲ್ 1 ಉಡಾವಣೆ 
ದೇಶ

ಆದಿತ್ಯಾ ಎಲ್ 1 ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಹರ್ಷ, ಶುಭ ಕೋರಿದ ಅಮಿತ್ ಶಾ

ಚಂದ್ರಯಾನ-3 (Chandrayaan-3) ಯಶಸ್ಸಿನ ಬೆನ್ನಲ್ಲೇ ಇಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆದಿತ್ಯಾ ಎಲ್ 1 ನೌಕೆಯನ್ನೂ ಕೂಡ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ಸಿನ ಬೆನ್ನಲ್ಲೇ ಇಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆದಿತ್ಯಾ ಎಲ್ 1 ನೌಕೆಯನ್ನೂ ಕೂಡ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ (Tweet) ಮೂಲಕ ಅಭಿನಂದನೆ ತಿಳಿಸಿದ್ದಾರೆ. 

'ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದುಕೊಂಡಿದ್ದಾರೆ.

ಅಮಿತ್ ಶಾ ಅಭಿನಂದನೆ
ಆದಿತ್ಯ ಎಲ್-1 ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದು, "ಭಾರತದ ಮೊದಲ ಸೌರ ಮಿಷನ್ ಆದಿತ್ಯ L1 ಯಶಸ್ವಿ ಉಡಾವಣೆಗಾಗಿ ರಾಷ್ಟ್ರವು ಹೆಮ್ಮೆಪಡುತ್ತದೆ ಮತ್ತು ಸಂತೋಷವಾಗಿದೆ. ಇದು ಅಮೃತ ಕಾಲದ ಸಮಯದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಈಡೇರಿಸುವತ್ತ ಒಂದು ದೈತ್ಯ ಹೆಜ್ಜೆಯಾಗಿದೆ." ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT