ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಸೆಪ್ಟೆಂಬರ್ 5 ಶಿಕ್ಷಕರ ದಿನ: 75 ಶಿಕ್ಷಕರಿಗೆ ರಾಷ್ಟ್ರಪತಿ ಮುರ್ಮು ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೇಶದ 75 ಆಯ್ದ ಪ್ರಶಸ್ತಿ ಪುರಸ್ಕೃತರಿಗೆ ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೇಶದ 75 ಆಯ್ದ ಪ್ರಶಸ್ತಿ ಪುರಸ್ಕೃತರಿಗೆ ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ, ಭಾರತವು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ನ್ನು ರಾಷ್ಟ್ರೀಯ ಶಿಕ್ಷಕರ ದಿನವನ್ನಾಗಿ ಆಚರಿಸುತ್ತದೆ.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ಉದ್ದೇಶವು ದೇಶದಲ್ಲಿ ಶಿಕ್ಷಕರ ಅನನ್ಯ ಕೊಡುಗೆಯನ್ನು ಕೊಂಡಾಡುವುದು ಮತ್ತು ತಮ್ಮ ಬದ್ಧತೆ ಮತ್ತು ಸಮರ್ಪಣೆಯ ಮೂಲಕ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮಾತ್ರವಲ್ಲದೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದ ಶಿಕ್ಷಕರನ್ನು ಗೌರವಿಸುವುದಾಗಿದೆ. 

ಪ್ರಶಸ್ತಿಯು ಅರ್ಹತಾ ಪ್ರಮಾಣ ಪತ್ರ, 50,000 ನಗದು ಪ್ರಶಸ್ತಿ ಮತ್ತು ಬೆಳ್ಳಿ ಪದಕವನ್ನು ಹೊಂದಿದೆ.ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿಯವರೊಂದಿಗೆ ಸಂವಾದ ನಡೆಸುವ ಅವಕಾಶವೂ ದೊರೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ  ಇಲಾಖೆ, ಶಿಕ್ಷಣ ಸಚಿವಾಲಯವು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಕಠಿಣ, ಪಾರದರ್ಶಕ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ದೇಶದ ಅತ್ಯುತ್ತಮ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದೆ.

ಈ ವರ್ಷ, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ವ್ಯಾಪ್ತಿಯನ್ನು ಉನ್ನತ ಶಿಕ್ಷಣ ಇಲಾಖೆ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಶಿಕ್ಷಕರನ್ನು ಸೇರಿಸಲು ವಿಸ್ತರಿಸಲಾಗಿದೆ.

50 ಶಾಲಾ ಶಿಕ್ಷಕರು, ಉನ್ನತ ಶಿಕ್ಷಣದಿಂದ 13 ಶಿಕ್ಷಕರು ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದಿಂದ 12 ಶಿಕ್ಷಕರಿಗೆ ಈ ವರ್ಷ ಪ್ರಶಸ್ತಿ ನೀಡಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT