ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಲಾಂ ನಬಿ ಆಜಾದ್ 
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್‌ಕೆ ಸಿಂಗ್ ಮತ್ತಿತರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.  

ಈ ಸಮಿತಿಯು ತಕ್ಷಣವೇ ಕಾರ್ಯ ನಿರ್ವಹಣೆಯನ್ನು ಪ್ರಾರಂಭಿಸಲಿದ್ದು, ಶೀಘ್ರವಾಗಿ ಶಿಫಾರಸು ಮಾಡಲಿದೆ. ಮಾಜಿ ಲೋಕಸಭಾ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಕೇಂದ್ರ ಜಾಗೃತ ಆಯೋಗದ ಮಾಜಿ ಮುಖ್ಯಸ್ಥ ಸಂಜಯ್ ಕೊಠಾರಿ ಸಹ ಸದಸ್ಯರಾಗಿದ್ದಾರೆ. ಸಮಿತಿಯ ಸಭೆಗಳಲ್ಲಿ ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾಗವಹಿಸಲಿದ್ದು, ಕಾನೂನು ವ್ಯವಹಾರಗಳ ಕಾರ್ಯದರ್ಶಿ ನಿತೇನ್ ಚಂದ್ರ ಸಮಿತಿಯ ಕಾರ್ಯದರ್ಶಿಯಾಗಿರುತ್ತಾರೆ.

ಸಮಿತಿಯು ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶಕ್ಕಾಗಿ ಸಂವಿಧಾನ ತಿದ್ದುಪಡಿ ಸೇರಿದಂತೆ ಮತ್ತಿತರ ಯಾವುದೇ  ಅಗತ್ಯ ಕಾನೂನುಗಳು ಮತ್ತು ನಿಯಮಗಳನ್ನು ಪರಿಶೀಲಿಸಿ, ಶಿಫಾರಸು ಮಾಡುತ್ತದೆ. ಅಲ್ಲದೇ, ಸಂವಿಧಾನದ ತಿದ್ದುಪಡಿಗಳಿಗೆ ರಾಜ್ಯಗಳ ಅನುಮೋದನೆಯ ಅಗತ್ಯವಿದ್ದಲ್ಲಿ ಅದನ್ನು ಕೂಡಾ ಪರಿಶೀಲಿಸಿ, ಶಿಫಾರಸು ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT