ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅವಿತಿದ್ದ ಇಬ್ಬರು ಉಗ್ರರನ್ನು ವಿಶೇಷ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂದಿತ ಆರೋಪಿಗಳನ್ನು ಘಾಟ್ ಗ್ರಾಮದ ಫಿರ್ದೌಸ್ ಅಹ್ಮದ್ ವಾನಿ ಮತ್ತು ಭಾರತ್ ಗ್ರಾಮದ ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

ಇಬ್ಬರೂ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದು, 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ಬಂಧನಗಳೊಂದಿಗೆ, ಆಗಸ್ಟ್ 31 ರಿಂದ ಜಮ್ಮು ಪ್ರದೇಶದಲ್ಲಿ ದಶಕಗಳಿಂದ ತಲೆಮರೆಸಿಕೊಂಡಿರುವ ಒಟ್ಟು 10 ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಹೆಚ್ಚಿನವರು ದೋಡಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಅಧಿಕಾರಿಗಳ ಪ್ರಕಾರ, ವಿಶೇಷ ತನಿಖಾ ಸಂಸ್ಥೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಭಯೋತ್ಪಾದನೆಯನ್ನು ಸಾಧಿಸುವ ತನ್ನ ದೊಡ್ಡ ಉದ್ದೇಶ ಮತ್ತು ಆದೇಶದ ಅನುಸಾರವಾಗಿ, ಕಾನೂನಿನಡಿಯಲ್ಲಿ ವಿಚಾರಣೆಯನ್ನು ಎದುರಿಸಲು ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲಾ ಪರಾರಿ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಕಾಶ್ಮೀರದಲ್ಲಿ 417 ಮತ್ತು ಜಮ್ಮುವಿನಲ್ಲಿ 317 ಸೇರಿದಂತೆ ಒಟ್ಟು 734 ತಲೆಮರೆಸಿಕೊಂಡವರಲ್ಲಿ 327 ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಲ್ಲಿ ಬೇಕಾಗಿದ್ದಾರೆ, ಎಸ್‌ಐಎ ಇದುವರೆಗೆ 369 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಮತ್ತು ಗುರುತಿಸಿದೆ. ಈ ಪೈಕಿ ಜಮ್ಮುವಿನಲ್ಲಿ 215 ಮತ್ತು ಕಾಶ್ಮೀರದಲ್ಲಿ 154 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT