ಉದಯನಿಧಿ ಸ್ಟಾಲಿನ್ 
ದೇಶ

'ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ, ಅದನ್ನು ನಿರ್ಮೂಲನೆ ಮಾಡಬೇಕು': ವಿವಾದ ಹುಟ್ಟುಹಾಕಿದ ಉದಯನಿಧಿ ಸ್ಟಾಲಿನ್ ಹೇಳಿಕೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ, ಅದನ್ನು ತೊಡೆದುಹಾಕಬೇಕು ಎಂದು ಹೇಳಿದ್ದಲ್ಲದೆ ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆ ರೀತಿ ಎಂದು ಹೋಲಿಸಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

"ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. 

ಈ ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ, ಹಲವರು ತಮಿಳುನಾಡು ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ. 

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಇತ್ತೀಚೆಗೆ ಮುಂಬೈನಲ್ಲಿ ಸಹ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿತು. ಈ ಸಭೆಯ ಉದ್ದೇಶವು ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಸ್ಪರ್ಧಿಸಲಿರುವ ಅವರ ಕಾರ್ಯತಂತ್ರಗಳನ್ನು ಸಮನ್ವಯಗೊಳಿಸುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT