ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು. 
ದೇಶ

ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆ

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ.

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ.

ಬಾರಾಬಂಕಿಯ ಫತೇಪುರ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿಗ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಈ ವರೆಗೂ 12 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಅವಶೇಷಗಳಡಿ ಇನ್ನೂ ಮೂವರು ಸಿಲುಕಿರುವ ಶಂಕೆಗಳಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರಾಬಂಕಿಯಲ್ಲಿ ಕಟ್ಟಡ ಕುಸಿತದ ಬಗ್ಗೆ ಇಂದು ಮುಂಜಾನೆ 3.10 ಕ್ಕೆ ನಮಗೆ ಮಾಹಿತಿ ಬಂದಿತ್ತು. ಕಟ್ಟಡದಲ್ಲಿದ್ದ 16 ಜನರ ಪೈಕಿ 12 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮೂರ್ನಾಲ್ಕು ಮಂದಿ ಇನ್ನು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಿಸಿರುವ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು, ಎನ್‌ಡಿಆರ್‌ಎಫ್ ತಂಡ ಶೀಘ್ರದಲ್ಲೇ ಆಗಮಿಸಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಘಟನೆಯಲ್ಲಿ ಮೃತಪಟ್ಟವರ ಹಾಗೂ ಗಾಯಾಳುಗಳ ಪಟ್ಟಿಯನ್ನು ಬಾರಾಬಂಕಿ ಆಡಳಿತ ಮಂಡಳಿಯು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT