ಮೃತಪಟ್ಟ ಗಗನ ಸಖಿ ರೂಪಾಲ್ ಓಗ್ರೆ 
ದೇಶ

ಮುಂಬೈ: ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ!

ವಾಣಿಜ್ಯ ನಗರಿ ಮುಂಬೈನ ಅಪಾರ್ಟ್‌ಮೆಂಟ್‌ ಒಂದರಲ್ಲಿ  ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

 ಮೃತರನ್ನು ರೂಪಲ್ ಓಗ್ರೆ ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ ಮೂಲದವರಾದ ಈಕೆ,  ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಏಪ್ರಿಲ್‌ನಲ್ಲಿ ಮುಂಬೈಗೆ ಬಂದಿದ್ದರು. ಉಪನಗರ ಅಂಧೇರಿಯ ಮರೋಲ್ ಪ್ರದೇಶದ ಕ್ರಿಶನ್‌ಲಾಲ್ ಮರ್ವಾಹ್ ಮಾರ್ಗದಲ್ಲಿರುವ ಎನ್‌ಜಿ ಕಾಂಪ್ಲೆಕ್ಸ್‌ನಲ್ಲಿರುವ ಫ್ಲಾಟ್‌ನಲ್ಲಿ ಭಾನುವಾರ ತಡರಾತ್ರಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಕುಟುಂಬ ಸದಸ್ಯರ ಫೋನ್ ಕರೆಯನ್ನು ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದು, ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದನ್ನು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನು ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು  ಅವರು ತಿಳಿಸಿದ್ದಾರೆ.

ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT