ಸುನೀತಾ ಕೇಜ್ರಿವಾಲ್ 
ದೇಶ

ಎರಡು ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರು: ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿಗೆ ಕೋರ್ಟ್ ಸಮನ್ಸ್

ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ದೆಹಲಿ

ನವದೆಹಲಿ: ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ನಾಯಕ ಹರೀಶ್ ಖುರಾನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು, ಆರೋಪಿ ಸುನೀತಾ ಅವರಿಗೆ ನವೆಂಬರ್ 18 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

"ದೂರುದಾರರ ಆರೋಪಗಳನ್ನು ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯಾದ ಸುನೀತಾ ಕೇಜ್ರಿವಾಲ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ಪ್ರಕರಣದ ವಿಚಾರಣೆಗೆ ಅಂಗೀಕರಿಸಿದ್ದು, ಆರೋಪಿಗೆ ಸಮನ್ಸ್ ನೀಡಲಾಗಿದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಇಬ್ಬರು ಸಾಕ್ಷಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಮತದಾರರ ಪಟ್ಟಿಗಳ ಪ್ರಕಾರ, ಸುನೀತಾ ಕೇಜ್ರಿವಾಲ್ ಅವರ ಹೆಸರು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!