ಚಂದ್ರ ಕುಮಾರ್ ಬೋಸ್ 
ದೇಶ

ಬಿಜೆಪಿ ತೊರೆದ ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಚಂದ್ರ ಬೋಸ್ ಅವರು 2016 ರಲ್ಲಿ ಬಿಜೆಪಿ ಸೇರಿದ್ದರು ಮತ್ತು ಎರಡು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. 2016 ರಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಚಂದ್ರ ಬೋಸ್ ಅವರು ಸ್ಪರ್ಧಿಸಿದ್ದರು.

"ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಆ ರೀತಿಯ ಏನೂ ಆಗಲಿಲ್ಲ" ಎಂದು ಚಂದ್ರ ಬೋಸ್ ಅವರು ಹೇಳಿದ್ದಾರೆ.

2016 ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಬೋಸ್ ಅವರನ್ನು 2020ರಲ್ಲಿ ಪಕ್ಷ ಪುನರ್​​ ರಚನೆ ಸಮಯದಲ್ಲಿ ಅವರನ್ನು ಕೈಬಿಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು, 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT