ದೇಶ

ರಾಷ್ಟ್ರಪತಿಗಳ ಜಿ20 ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ ಭಾಗಿ

Lingaraj Badiger

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ದೆಹಲಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ 'ಭಾರತ್ ರಾಷ್ಟ್ರಪತಿ' ಎಂದು ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾನರ್ಜಿ, ಇಂಡಿಯಾ ಅಂದರೆ ಭಾರತ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

"ಭಾರತದ ಹೆಸರನ್ನು ಬದಲಾಯಿಸಲಾಗುತ್ತಿದೆ ಎಂದು ನಾನು ಕೇಳಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಹೆಸರಿನಜಿ 20 ಆಹ್ವಾನ ಪತ್ರಿಕೆಯಲ್ಲಿ ಭಾರತ್ ರಾಷ್ಟ್ರಪತಿ ಎಂದು ಬರೆಯಲಾಗಿದೆ. ಇಂಗ್ಲಿಷ್‌ನಲ್ಲಿ ನಾವು ಇಂಡಿಯಾ ಎಂದು ಹೇಳುತ್ತೇವೆ. ಹಿಂದಿಯಲ್ಲಿ ನಾವು 'ಭಾರತ್ ಮತ್ತು ಭಾರತ್ ಕಾ ಸಂವಿಧನ್' ಎಂದು ಹೇಳುತ್ತೇವೆ. ನಾವೆಲ್ಲರೂ ಭಾರತ್ ಎಂದು ಹೇಳುತ್ತೇವೆ, ಇದರಲ್ಲಿ ಹೊಸದೇನಿದೆ? ಎಂದಿದ್ದಾರೆ.

SCROLL FOR NEXT