ದೇಶ

ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ, ಕ್ಷಮೆ ಕೇಳಲ್ಲ: ಉದಯನಿಧಿ ಸ್ಟಾಲಿನ್

Manjula VN

ಚೆನ್ನೈ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆಯಾಗಿದ್ದು, ಕ್ಷಮೆ ಕೇಳುವುದಿಲ್ಲ ಎಂದು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಹೇಳಿದ್ದಾರೆ.

ಸನಾತನ ಧರ್ಮವನ್ನು ಡೆಂಗಿ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಇವರ ವಿರುದ್ಧ ಹಾಗೂ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿವಾದ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿರುವ ಉದಯನಿಧಿ ಅವರು, ಯಾವುದೇ ಬೆದರಿಕೆಯನ್ನು ಎದುರಿಸಲು ನಾನು  ಸಿದ್ಧ ಎಂದು ಹೇಳಿದ್ದಾರೆ.

ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಈಗಿನ ರಾಷ್ಟ್ರಪತಿ ಅವರನ್ನು ದೂರ ಇಟ್ಟಿರುವುದೇ ಸಾಕ್ಷಿಯಾಗಿದೆ. ನನ್ನ ಹೇಳಿಕೆ ಕುರಿತು ನಾನು ಕ್ಷಮೆಯಾಚಿಸುವುದಿಲ್ಲ ಎಂದು ತಿಳಿಸಿದ್ದಾರೆ.

SCROLL FOR NEXT