ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, ವಿದ್ಯಾರ್ಥಿಗಳು ಸೇರಿ 55 ಪ್ರಯಾಣಿಕರಿಗೆ ಗಾಯ
ಟ್ರಕ್'ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 47 ಮಂದಿ ವಿದ್ಯಾರ್ಥಿಗಳು ಸೇರಿ 55 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಪಾಲ್ಘರ್: ಟ್ರಕ್'ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 47 ಮಂದಿ ವಿದ್ಯಾರ್ಥಿಗಳು ಸೇರಿ 55 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 55 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಬಹೇತಕ ಮಂದಿ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಲಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಾಡಾ ತಹಸಿಲ್‌ನ ದೇಸಾಯಿ ಗ್ರಾಮದ ಬಳಿ ಇಂದು ಬೆಳಿಗ್ಗೆ 6.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಬಸ್ ಅನ್ನು ಎಂಎಸ್‌ಆರ್‌ಟಿಸಿ ನಿರ್ವಹಿಸುತ್ತಿತ್ತು. ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ನಿಗಮದ ಅಧಿಕಾರಿ ವಿಲಾಸ್ ರಾಥೋಡ್ ಅವರು ಮಾಹಿತಿ ನೀಡಿದ್ದಾರೆ.
ಬಸ್‌ನಲ್ಲಿ ಒಟ್ಟು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು, ಈ ವೇಳೆ ಚಿಂಚಪಾಡ-ವಾಡಾ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಇದ್ದಕ್ಕಿದ್ದಂತೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 47 ವಿದ್ಯಾರ್ಥಿಗಳು ಸೇರಿದಂತೆ 55 ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ, ಅವರಲ್ಲಿ ಯಾರಿಗೂ ಗಂಭೀರತರವಾದ ಗಾಯವಾಗಿಲ್ಲ. ಬಸ್ ಚಾಲಕ ಸೇರಿದಂತೆ ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.