ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ 
ದೇಶ

ಜಿ20 ಶೃಂಗಸಭೆ: ಪ್ರಧಾನಿ ಮೋದಿ ಎದುರು ಇಂಡಿಯಾ ಬದಲಿಗೆ 'ಭಾರತ್' ಹೆಸರಿನ ನಾಮಫಲಕ!

ಇಂಡಿಯಾ ಹೆಸರು ಬದಲಾವಣೆ ವಿಚಾರ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿಯೂ ಇಂಡಿಯಾ ಬದಲಿಗೆ 'ಭಾರತ್ ''ಹೆಸರಿನ ಪ್ರಸ್ತಾಪ ಬಂದಿದೆ.

ನವದೆಹಲಿ: ಇಂಡಿಯಾ ಹೆಸರು ಬದಲಾವಣೆ ವಿಚಾರ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿಯೂ ಇಂಡಿಯಾ ಬದಲಿಗೆ 'ಭಾರತ್ ''ಹೆಸರಿನ ಪ್ರಸ್ತಾಪ ಬಂದಿದೆ.

ಇಂದು ಜಿ-20 ಶೃಂಗಸಭೆಯನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾಗ ದೇಶದ ಹೆಸರನ್ನು 'ಭಾರತ್'' ಎಂದು ಪ್ರದರ್ಶಿಸಲಾಯಿತು. ಮೈಕ್ ನ ನೇಮ್ ಬೋರ್ಡ್ ನಲ್ಲಿಯೂ Bharat ಎಂದು ಪ್ರದರ್ಶಿಸಲಾಯಿತು.

ತಮ್ಮ ಉದ್ಘಾಟನಾ ಭಾಷಣಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಜಿ-20 ಶೃಂಗಸಭೆ ಸ್ಥಳವಾದ ಭಾರತ್ ಮಂಟಪದಲ್ಲಿ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ವಿಶ್ವ ನಾಯಕರನ್ನು ಸ್ವಾಗತಿಸಿದರು.

ಜಿ-20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖದ ನಂತರ ವಿವಾದಕ್ಕ ಕಾರಣವಾಗಿದ್ದು, ವಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಅಲೈಯನ್ಸ್ (INDIA) ಎಂದು ಹೆಸರಿಟ್ಟಿರುವುದರಿಂದ ಹೆಸರು ಬದಲಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಟೀಕಿಸುತ್ತಿವೆ. 

ಕೆಲವು ನಾಯಕರು 'ಇಂಡಿಯಾ' ಎಂಬ ಇಂಗ್ಲಿಷ್ ಹೆಸರನ್ನು ವಸಾಹತುಶಾಹಿ ಪರಂಪರೆ ಎಂದು ಪ್ರತಿಪಾದಿಸಿದ್ದಾರೆ. ಆದಾಗ್ಯೂ, ಸಂವಿಧಾನದಲ್ಲಿ ದೇಶಕ್ಕೆ ಎರಡೂ ಹೆಸರುಗಳನ್ನು ಬಳಸಲಾಗಿದೆ ಎಂದು ಬಿಜೆಪಿಯ ಕೆಲವು ನಾಯಕರು ಹೇಳುವುದರೊಂದಿಗೆ 'ಭಾರತ್ ವರ್ಸಸ್ ಇಂಡಿಯಾ' ಚರ್ಚೆಗೆ ಸ್ವಲ್ಪ ಕಡಿವಾಣ ಹಾಕಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT