ದೇಶ

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ

Lingaraj Badiger

ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್‌ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ.

ರಾಜಕೀಯ ಸೇಡಿನಿಂದ ಚಂದ್ರಬಾಬು ನಾಯ್ಡು ಅವರನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಬಂಧಿಸಿದ್ದು, ಮಾಜಿ ಸಿಎಂ ಬೆಂಬಲಕ್ಕೆ ಜನಸೇನಾ ಪಕ್ಷ ನಿಲ್ಲಲಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋವುಂಟು ಮಾಡಿದೆ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕರನ್ನು ಬಂಧಿಸುವ ಪ್ರವೃತ್ತಿ ಮುಂದುವರೆದಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಯ್ಡು ಅವರನ್ನು ಬಂಧಿಸಿದ ರೀತಿ ಮತ್ತು ಚಿತ್ತೂರಿನಲ್ಲಿ ಇತ್ತೀಚಿನ ಘಟನೆಗಳು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಜನಸೇನಾ ಪಕ್ಷದ ನಾಯಕ ಆರೋಪಿಸಿದ್ದಾರೆ.

ಸ್ಕಿಲ್​ ಡೆವಲಪ್​​ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ, ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧಿಸಲಾಗಿದೆ.

SCROLL FOR NEXT