ಜಿ20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ 
ದೇಶ

'ಜಿ20 ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ': ಚೀನಾ ಅಧ್ಯಕ್ಷರ ಗೈರಿಗೆ ಅಮೆರಿಕ ಅಧ್ಯಕ್ಷರ ಪರೋಕ್ಷ ಟಾಂಗ್!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಜಿ20 ಶೃಂಗಸಭೆಗೆ ಗೈರಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಪರೋಕ್ಷ ಟಾಂಗ್ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, 'ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಜಿ20 ಶೃಂಗಸಭೆಗೆ ಗೈರಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಪರೋಕ್ಷ ಟಾಂಗ್ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, 'ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

ಜಿ 20 ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡಿದಾಗ ಅವರ ಜೊತೆಯಲ್ಲಿ ಆಗಮಿಸಿದ್ದ ಅಮೆರಿಕದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಮಾತನಾಡಿದ ಜೋ ಬೈಡನ್, 'ಜಿ20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇದ್ದಿದ್ದರೆ ಚೆನ್ನಾಗಿರುತ್ತಿತ್ತು, ಆದರೆ ಶೃಂಗಸಭೆ "ಚೆನ್ನಾಗಿ ನಡೆಯುತ್ತಿದೆ" ಎಂದು ಹೇಳುವ ಮೂಲಕ ಪರೋಕ್ಷ ಟಾಂಗ್ ನೀಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ಅನುಪಸ್ಥಿತಿಯು ಜಿ 20 ನಾಯಕರ ಶೃಂಗಸಭೆಯ ಮೇಲೆ ಪರಿಣಾಮ ಬೀರಿದೆಯೇ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಬೈಡನ್, "ಅವರು ಇಲ್ಲಿದಿದ್ದರೆ ಚೆನ್ನಾಗಿರುತ್ತಿತ್ತು. ಆದರೂ ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು.

ಇದೇ ಪ್ರಶ್ನೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರನ್ನು ಕೇಳಿದಾಗ, 'ಇಂತಹ ಮಹತ್ವದ ಶೃಂಗಸಭೆಗಳಲ್ಲಿ ಅವರು ಯಾವ ಮಟ್ಟದಲ್ಲಿ ಪ್ರತಿನಿಧಿಸುತ್ತಾರೆ ಎಂಬುದನ್ನು ಪ್ರತಿ ದೇಶವು ನಿರ್ಧರಿಸುತ್ತದೆ ಮತ್ತು ಯಾರೂ ಅದರ ಅರ್ಥಗಳನ್ನು ಅತಿಯಾಗಿ ಓದಬಾರದು. ಆ ದೇಶ ಯಾವ ನಿಲುವು ತೆಗೆದುಕೊಂಡಿದೆ, ಆ ದೇಶವು ಚರ್ಚೆಗಳು ಮತ್ತು ಫಲಿತಾಂಶಗಳಿಗೆ ಎಷ್ಟು ಕೊಡುಗೆ ನೀಡಿದೆ ಎಂಬುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.

ಅದಾಗ್ಯೂ ಜಿ20 ಶೃಂಗಸಭೆಯ ವಿವಿಧ ಫಲಿತಾಂಶಗಳಿಗೆ ಚೀನಾ ತುಂಬಾ ಬೆಂಬಲ ನೀಡುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT