ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸತಾರಾ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಖಟಾವೊ ತಹಸಿಲ್‌ನ ಪುಸೆವಾಲಿ ಗ್ರಾಮದಲ್ಲಿ ನಡೆದ ಈ ಘಟನೆಯು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. 
ಘಟನೆಯಲ್ಲಿ ಕೆಲವು ಮನೆಗಳಿಗೆ ಹಾನಿ ಮಾಡಲಾಗಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು  ಏಳರಿಂದ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸತಾರಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಸಮುದಾಯದ ಕೆಲವು ಯುವಕರ ಆಕ್ಷೇಪಾರ್ಹ ಪೋಸ್ಟ್  ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಯನ್ನುಂಟು ಮಾಡಿದ್ದು, ಕೋಮು ಘರ್ಷಣೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಅಡಚಣೆಗೆ ಕಾರಣವಾಯಿತು. ಪೊಲೀಸರು ತಕ್ಷಣ ಸ್ಪಂದಿಸಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿದರು. 

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್