ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು

ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರೆಲ್ಲರೂ, ಧೋಲಾಪುರ ಜಿಲ್ಲೆಯ ಸಿಕರ್‌ನಲ್ಲಿರುವ ಶ್ಯಾಮ್‌ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದರು. ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 2 ಗೂಳಿಗಳ ಶವಗಳೂ ಕೂಡ ಪತ್ತೆಯಾಗಿದ್ದು, ಗೂಳಿಗಳ ಕಾಳಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಕ್ಕಿಯಾದ ಪರಿಣಾಮ ಕಾರು ಪರಿಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮೃತರನ್ನು ಹರೇಂದ್ರ ಸಿಂಗ್ (32), ಅವರ ಪತ್ನಿ ಮಮತಾ (30), ಅವರ ಮಗಳು ಜಾನ್ವಿ (6), ಮಮತಾ ಅವರ ಸಹೋದರಿ ಸುಧಾ (35), ಅವರ ಪತಿ ಸಂತೋಷ್ (37) ಮತ್ತು ಅವರ ಮಗ ಅನುಜ್ (5) ಎಂದು ಗುರುತಿಸಲಾಗಿದೆ.

ಪೊಲೀಸ್‌ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತ ಪಟ್ಟಿದ್ದರು

ಇಬ್ಬರು ಅಪ್ರಾಪ್ತರು ಗಾಯಗಳೊಂದಿಗೆ ಪಾರಾಗಿದ್ದು, ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ ಎಸ್‌ಐಆರ್ ನಡೆಸಿ: ಕಾಂಗ್ರೆಸ್ ಆಗ್ರಹ

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

SCROLL FOR NEXT