ವಿಕೆ ಸಿಂಗ್ 
ದೇಶ

ಪಿಒಕೆ ತಾನಾಗಿಯೇ ಭಾರತದ ಭಾಗವಾಗಲಿದೆ: ಕೇಂದ್ರ ಸಚಿವ ವಿಕೆ ಸಿಂಗ್

ಪಾಕ್ ಆಕ್ರಮಿತ ಕಾಶ್ಮೀರ ತಾನಾಗಿಯೆ ಭಾರತದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

ಜೈಪುರ: ಪಾಕ್ ಆಕ್ರಮಿತ ಕಾಶ್ಮೀರ ತಾನಾಗಿಯೆ ಭಾರತದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

ರಾಜಸ್ಥಾನದ ದೌಸಾದಲ್ಲಿ ಬಿಜೆಪಿಯ ಪರಿವರ್ತನ್ ಯಾತ್ರೆಯ ಭಾಗವಾಗಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿ-20 ಶೃಂಗಸಭೆಯನ್ನು ದೆಹಲಿಯಲ್ಲಿ ಯಶಸ್ವಿಯಾಗಿ ಆಯೋಜಿಸುವ ಮೂಲಕ ಭಾರತ ತನ್ನ ಸಾಮರ್ಥ್ಯ, ಶಕ್ತಿಯನ್ನು ಜಗತ್ತಿಗೆ ತೋರಿಸಿದೆ ಎಂದು ಹೇಳಿದ್ದಾರೆ. 

ಶೀಘ್ರವೇ ಪಿಒಕೆ ತಾನಾಗಿಯೇ ಭಾರತದ ಭಾಗವಾಗಲಿದೆ ಎಂದು ಮಾಜಿ ಸೇನಾ ಮುಖ್ಯಸ್ಥರೂ ಆಗಿರುವ ಕೇಂದ್ರ ಸಚಿವರು ಹೇಳಿದ್ದಾರೆ. G20ಯ ವೈಭವ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ವಿಶಿಷ್ಟ ಗುರುತನ್ನು ತಂದುಕೊಟ್ಟಿದೆ, ಜಗತ್ತಿಗೆ ಭಾರತದ ಶಕ್ತಿ-ಸಾಮರ್ಥ್ಯಗಳು ಸಾಬೀತಾಗಿದೆ ಎಂದು ವಿಕೆ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಜಿ-20 ಸಭೆ ಅಭೂತಪೂರ್ವವಾಗಿತ್ತು. ಭಾರತವನ್ನು ಎಲ್ಲಾ ದೇಶಗಳೂ ಬಹಿರಂಗವಾಗಿ ಮುಕ್ತಕಂಠದಿಂದ ಶ್ಲಾಘಿಸಿವೆ ಎಂದು ಸಿಂಗ್ ಹೇಳಿದ್ದಾರೆ.

ಇದೇ ವೇಳೆ ರಾಜಸ್ಥಾನದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ವಿಕೆ ಸಿಂಗ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಹಾಗೂ ಯುವಕರು, ರೈತರಿಗೆ ನೀಡಿದ್ದ ಭರವಸೆಗಳನ್ನು ಈ ವರೆಗೂ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT