ಸುಪ್ರೀಂಕೋರ್ಟ್ 
ದೇಶ

ದೇಶದ್ರೋಹ ಕಾನೂನಿನ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ: ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು

ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪಂಚ ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ.  

ನವದೆಹಲಿ: ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪಂಚ ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ.  

ಸಂಸತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನು ಮರು ಪರಿಶೀಲಿಸುವ ಪ್ರಕ್ರಿಯೆಯಲ್ಲಿರುವುದರಿಂದ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸದಂತೆ ಕೇಂದ್ರ ಮಾಡಿದ್ದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯ ಪೀಠ ತಿರಸ್ಕರಿಸಿದೆ. 

ಕನಿಷ್ಠ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠ ರಚನೆಗೆ ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳಲು ಸಿಜೆಐ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ನಿರ್ದೇಶನ ನೀಡಿತು. ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನು ಮರುಪರಿಶೀಲಿಸುವ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ಕೇಂದ್ರ ಹೇಳಿದ್ದರಿಂದ ಮೇ 1 ರಂದು ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿತ್ತು.

ಆಗಸ್ಟ್ 11 ರಂದು ವಸಾಹತುಶಾಹಿ ಕಾಲದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಮಹತ್ವದ ಕ್ರಮದಲ್ಲಿ ಕೇಂದ್ರವು ಐಪಿಸಿ, ಸಿಆರ್ ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ ಬದಲಿಸಲು ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಅಲ್ಲದೇ, ದೇಶದ್ರೋಹದ ಕಾನೂನನ್ನು ರದ್ದುಗೊಳಿಸಿ ಅಪರಾಧದ ವ್ಯಾಪಕ ವ್ಯಾಖ್ಯಾನದೊಂದಿಗೆ ಹೊಸ ನಿಬಂಧನೆಗಳನ್ನು ಮುಂದಿಟ್ಟಿತ್ತು.

ಕಳೆದ ವರ್ಷ ಮೇ 11 ರಂದು ಸರ್ವೋಚ್ಚ ನ್ಯಾಯಾಲಯವು ದೇಶದ್ರೋಹದ ಮೇಲಿನ ಶಿಕ್ಷೆಯ ಕಾನೂನನ್ನು 'ಸೂಕ್ತ' ಸರ್ಕಾರಿ ವೇದಿಕೆಯು ಮರುಪರಿಶೀಲಿಸುವರೆಗೆ ತಡೆಹಿಡಿದಿತ್ತು ಮತ್ತು ನಿಬಂಧನೆ ಪ್ರಚೋದಿಸುವ ಯಾವುದೇ ಹೊಸ ಎಫ್‌ಐಆರ್ ಅನ್ನು ದಾಖಲಿಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶಿಸಿತು.ದೇಶದ್ರೋಹದ ಕಾನೂನು ಐಪಿಸೆ ಸೆಕ್ಷನ್ 124A ಅಡಿಯಲ್ಲಿ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ಒದಗಿಸುತ್ತದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್