ಮೃತ ಸೇನೆ ಶ್ವಾನ ಕೆಂಟ್ 
ದೇಶ

ರಜೌರಿ ಎನ್​ಕೌಂಟರ್​: ಯೋಧರನ್ನು ರಕ್ಷಿಸಿ ಉಗ್ರರ ಗುಂಡೇಟಿಗೆ ಭಾರತೀಯ ಸೇನೆಯ 6 ವರ್ಷದ ಶ್ವಾನ 'ಕೆಂಟ್' ಬಲಿ; ಇಬ್ಬರು ಉಗ್ರರು ಹತ!

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

ಇಬ್ಬರು ಉಗ್ರರು ಹಾಗೂ ಸೇನೆ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿ ಇಬ್ಬರು ಉಗ್ರರು ಹತನಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇವರೊಂದಿಗೆ ಸೇನೆಯ ಕೆಂಟ್‌ ಎನ್ನುವ ಶ್ವಾನ ತನ್ನ ಜತೆಗಿನ ಸೈನಿಕನ ಜೀವ ಉಳಿಸಿ ಮೃತಪಟ್ಟಿದೆ.

ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯ ನಾಯಿಯಾಗಿದ್ದು, ತನ್ನ ಹ್ಯಾಂಡ್ಲರ್ ಅನ್ನು ಉಳಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದೆ. ಕೆಂಟ್ ಕೊನೆಯುಸಿರೆಳೆಯುವ ಮುನ್ನ ಉಗ್ರರ ಜಾಡು ಹಿಡಿದು ಸೈನಿಕರನ್ನು ಅತ್ತ ಕರೆದೊಯ್ಯುತ್ತಿತ್ತು.

ಸೇನಾ ಶ್ವಾನ ಕೆಂಟ್ ಆಪರೇಷನ್ ಸುಜಲಿಗಾಲದಲ್ಲಿ ಮುಂಚೂಣಿಯಲ್ಲಿತ್ತು, ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಸೇರಿದಂತೆ ಇನ್ನೂ ಮೂವರು ಯೋಧರು ಗಾಯಗೊಂಡಿದ್ದಾರೆ.

ಇಬ್ಬರು ಉಗ್ರರು ಇಲ್ಲಿನ ಕಾಡಿನಲ್ಲಿ ಒಳನುಸುಳುತ್ತಿರುವ ಮಾಹಿತಿಯನ್ನು ಪಡೆದ ಸೇನೆ, ‘ಆಪರೇಷನ್‌ ಸುಜಲೀಗಾಲಾ’ ಮೂಲಕ ಹುಡುಕಾಟ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹಾಗೂ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಜೊತೆಗೆ ಇಬ್ಬರು ಸೇನೆ ಜವಾನ್‌ ಹಾಗೂ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿಕ್ಕ ಓರ್ವ ಉಗ್ರನಿಗಾಗಿ ಹುಡುಕಾಟ ಮುಂದುವರೆದಿದೆ. ಉಗ್ರರಿಂದ ಬಟ್ಟೆ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT