ಸಂಸತ್ತು 
ದೇಶ

ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ

ಸಂಸತ್ ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರದಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ನವದೆಹಲಿ: ಸಂಸತ್ ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರದಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವಂತೆ ವಿಪಕ್ಷಗಳಿಗೆ ಕರೆ ನೀಡಿದ್ದಾರೆ. ಸೆ.18 ರಿಂದ 22 ವರೆಗೆ 5 ದಿನಗಳ ಕಾಲ ಸಂಸತ್ ನ ವಿಶೇಷ ಅಧಿವೇಶನ ನಡೆಯಲಿದೆ.

ಇಂಡಿಯಾ ಮೈತ್ರಿಕೂಟದಲ್ಲಿರುವ 24 ಪಕ್ಷಗಳು ಸಂಸತ್ ನ ವಿಶೇಷ ಅಧಿವೇಶನದಲ್ಲಿ ಭಾಗಿಯಾಗುವುದಕ್ಕೆ ಒಪ್ಪಿದ್ದು, ಅಧಿವೇಶನದ ಕಾರ್ಯಸೂಚಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಕಳೆದ ತಿಂಗಳು ಮುಕ್ತಾಯಗೊಂಡ ಮುಂಗಾರು ಅಧಿವೇಶನ  ಹಳೆಯ ಸಂಸತ್ ಭವನದಲ್ಲಿ ನಡೆದಿತ್ತು. ಈ ಅಧಿವೇಶನ ಹಳೆಯ ಮತ್ತು ಹೊಸ ಸಂಸತ್ ಭವನಗಳಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ವರ್ಷಾಂತ್ಯಕ್ಕೆ ಪಂಚರಾಜ್ಯಗಳ ಚುನಾವಣೆಗಳಿಗೆ ತಯಾರಾಗುತ್ತಿರುವ ಪಕ್ಷಗಳಿಗೆ ವಿಶೇಷ ಅಧಿವೇಶನ ಕರೆದಿರುವುದು ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

ಅಂಗಡಿ ವ್ಯಾಪಾರಿಗೆ 10 ರೂ ಕ್ಯಾಶ್, 'ಮಿಸ್ಟರ್ ಮೋದಿ Digital India ಏನಾಯ್ತು'? ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ, Video

"ನನ್ನ ಸೀರೆ ಎಳೆದ, ತೊಡೆ ಮೇಲೆ ಕೈ ಇಟ್ಟ": ಬಗೆದಷ್ಟು ಬಯಲಾಗುತ್ತಿದೆ TCS ಭಯಾನಕತೆ!

ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ

SCROLL FOR NEXT