ದೇಶ

ಸನಾತನ ಧರ್ಮದ ಕುರಿತು ಹೇಳಿಕೆ: ಮುಂಬೈನಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲು

Ramyashree GN

ಥಾಣೆ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸಲ್ಲಿಕೆಯಾಗಿರುವ ದೂರಿನ ಮೇರೆಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಇಲ್ಲಿನ ಮೀರಾ ರೋಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮವು ಜನರಲ್ಲಿ ವಿಭಜನೆ ಮತ್ತು ತಾರತಮ್ಯವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು ಮತ್ತು ಅದು ಡೆಂಗ್ಯು ಮತ್ತು ಮಲೇರಿಯಾವಿದ್ದಂತೆ. ಹೀಗಾಗಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು.

ಸ್ಥಳೀಯ ನಿವಾಸಿಗಳ ದೂರಿನ ಆಧಾರದ ಮೇಲೆ, ಮೀರಾ ರೋಡ್ ಪೊಲೀಸರು ಮಂಗಳವಾರ ರಾತ್ರಿ ಸ್ಟಾಲಿನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 153-ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. 

ಎಫ್‌ಐಆರ್‌ ಪ್ರಕಾರ, ಸನಾತನ ಧರ್ಮವನ್ನು ಅನುಸರಿಸುವವರ ಭಾವನೆಗಳು ಮತ್ತು ಧಾರ್ಮಿಕ ಭಾವನೆಗಳಿಗೆ ಸ್ಟಾಲಿನ್ ಅವರ ಹೇಳಿಕೆ ನೋವುಂಟು ಮಾಡಿದೆ ಎಂದು ದೂರುದಾರರು ಹೇಳಿದ್ದಾರೆ.

SCROLL FOR NEXT