ರನ್‌ವೇಯಿಂದ ಜಾರಿದ ಖಾಸಗಿ ವಿಮಾನ 
ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ; 8 ಮಂದಿಗೆ ಗಾಯ

ಭಾರೀ ಮಳೆಯ ನಡುವೆ ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಖಾಸಗಿ ಸಣ್ಣ ವಿಮಾನವೊಂದು ರನ್‌ವೇಯಿಂದ ಜಾರಿದ್ದು, ಅವಘಡದಲ್ಲಿ ವಿಮಾನದಲ್ಲಿದ್ದ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು...

ಮುಂಬೈ: ಭಾರೀ ಮಳೆಯ ನಡುವೆ ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಖಾಸಗಿ ಸಣ್ಣ ವಿಮಾನವೊಂದು ರನ್‌ವೇಯಿಂದ ಜಾರಿದ್ದು, ಅವಘಡದಲ್ಲಿ ವಿಮಾನದಲ್ಲಿದ್ದ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ ಐದು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ನಂತರ ಸ್ವಲ್ಪ ಸಮಯದವರೆಗೆ ವಿಮಾನ ನಿಲ್ದಾಣದ ಎರಡೂ ರನ್‌ವೇಗಳನ್ನು ಬಂದ್ ಮಾಡಲಾಗಿತ್ತು ಮತ್ತು ಒಂದು ರನ್‌ವೇ ಸುಮಾರು 6.47ಕ್ಕೆ ಕಾರ್ಯಾಚರಣೆ ಪುನರಾರಂಭಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಎಸ್‌ಆರ್ ವೆಂಚರ್ಸ್‌ಗೆ ಸೇರಿದ ಲಿಯರ್‌ಜೆಟ್ 45 ವಿಟಿ-ಡಿಬಿಎಲ್ ವಿಮಾನ ವಿಶಾಖಪಟ್ಟಣಂನಿಂದ ಆಗಮಿಸಿತ್ತು. ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಸ್ಕಿಡ್ ಆಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಪ್ರಕಟಣೆಯಲ್ಲಿ ತಿಳಿಸಿದೆ.

ಖಾಸಗಿ ವಿಮಾನವೊಂದು ಮುಂಬೈ ವಿಮಾನ ನಿಲ್ದಾಣದಲ್ಲಿ ರನ್‌ವೇ 27 ರಲ್ಲಿ ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿದೆ. ಅದರಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು ಎಂದು ಡಿಜಿಸಿಎ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ