ಸಾಂದರ್ಭಿಕ ಚಿತ್ರ 
ದೇಶ

ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ದೆಹಲಿಯಲ್ಲಿ ಬಂಧಿಸಿದ NIA

ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್​ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ನವದೆಹಲಿ: ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್​ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

ನೈರೋಬಿಯಾದಿಂದ ದೆಹಲಿಗೆ ಆಗಮಿಸಿದ್ದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಆದರೆ, ಉಗ್ರ ಚಟುವಟಿಕೆಗಳಿಗೆ ವಿದೇಶಗಳಲ್ಲಿಯೇ ಕುಳಿತು ಹಣದ ವ್ಯವಸ್ಥೆ ಮಾಡುತ್ತಿದ್ದ. 2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.

ಅರಾಫತ್ ಅಲಿ ವಿದೇಶದಿಂದ ಕೆಲಸ ಮಾಡುತ್ತಿದ್ದು ಮುಸ್ಲಿಂ ಯುವಕರನ್ನು ಗುರುತಿಸುವುದು, ಆಮೂಲಾಗ್ರಗೊಳಿಸುವುದು ಮತ್ತು ಐಎಸ್‌ಗೆ ಸೇರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದನು. 

ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದ ಭಾಗವಾಗಿ ಮೊಹಮ್ಮದ್ ಶಾರಿಕ್ ಎಂಬ ಆರೋಪಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಪ್ರೆಶರ್ ಕುಕ್ಕರ್ ಐಇಡಿ ಅಳವಡಿಸಲು ತೆರಳುತ್ತಿದ್ದನು. ಆದರೆ, ಆಟೋ ರಿಕ್ಷಾದಲ್ಲಿ ಆಕಸ್ಮಿಕವಾಗಿ ಐಇಡಿ ಸ್ಫೋಟಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel