ಅಪಘಾತಕ್ಕೀಡಾದ ಲಾರಿ ಮತ್ತು ಕ್ರೂಸರ್ 
ದೇಶ

ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯ

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್  ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ...

ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್  ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.

"ಅಪಘಾತದಲ್ಲಿ ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಎಎನ್‌ಐಗೆ ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅವರು ಹೇಳಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು