ಸಾಂಕೇತಿಕ ಚಿತ್ರ 
ದೇಶ

ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!

ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ...

ನೋಯ್ಡಾ: ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, 8ನೇ ತರಗತಿಯ ವಿದ್ಯಾರ್ಥಿನಿಗೆ 20 ವರ್ಷದ ಯುವಕನೊಬ್ಬ ಸ್ವಲ್ಪ ಸಮಯದಿಂದ ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿದೆ.

ಬಾಲಕಿ ಮತ್ತು ಆರೋಪಿ ಇಬ್ಬರೂ ನೆರೆಹೊರೆಯವರಾಗಿದ್ದು, ಪರಸ್ಪರ ಮೊದಲಿನಿಂದಲೂ ಗೊತ್ತಿರುವವರೇ. ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿಯಲ್ಲಿ ಜೇವರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

"ಬಾಲಕಿಯ ತಂದೆ ಮತ್ತು ಸಹೋದರ ಇಂದು ಪೊಲೀಸರನ್ನು ಭೇಟಿ ಮಾಡಿ, ಜಹಾಂಗೀರ್‌ಪುರದಲ್ಲಿ ವಾಸಿಸುವ ಆರೋಪಿ ನಿನ್ನೆ ರಾತ್ರಿ 12.30 ರ ಸುಮಾರಿಗೆ ತಮ್ಮ ಮನೆಗೆ ಬಂದಿದ್ದನು ಎಂದು ತಿಳಿಸಿದ್ದಾರೆ. ಆರೋಪಿ ತನ್ನ ಸಹೋದರಿಯ ಫೋನ್ ಸಂಖ್ಯೆ ಪಡೆದು ಕಿರುಕುಳ ನೀಡಿದ್ದಾನೆ ಸಹೋದರ ಹೇಳಿರುವುದಾಗಿ" ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT