ರಾಮನಾಥ್ ಕೋವಿಂದ್ 
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧ ಸೆಪ್ಟೆಂಬರ್ 23 ರಂದು ಮೊದಲ ಸಭೆ

ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ ನೇತೃತ್ವ ವಹಿಸಿರುವ...

ಭುವನೇಶ್ವರ: ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ ನೇತೃತ್ವ ವಹಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ - ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 2 ರಂದು ಎಂಟು ಸದಸ್ಯರ ಸಮಿತಿ ರಚಿಸಿದೆ.

ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಕೋವಿಂದ್ ಅವರು ಇಂದು ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ರಾಮನಾಥ್ ಕೋವಿಂದ್ ಅವರು ಖಾಸಗಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಭುವನೇಶ್ವರಕ್ಕೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT