ಜಗನ್ ಮೋಹನ್ ರೆಡ್ಡಿ - ಚಂದ್ರಬಾಬು ನಾಯ್ಡು 
ದೇಶ

ಕಾನೂನಿನ ಮುಂದೆ ಎಲ್ಲರೂ ಸಮಾನರು: ನಾಯ್ಡು ಬಂಧನದ ಬಗ್ಗೆ ಮೌನ ಮುರಿದ ಆಂಧ್ರ ಸಿಎಂ ಜಗನ್

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಕೊನೆಗೂ ಮೌನ ಮುರಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದ್ದಾರೆ.

ವಿಜಯವಾಡ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಕೊನೆಗೂ ಮೌನ ಮುರಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದ್ದಾರೆ.

ನಾಯ್ಡು ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳೊಂದಿಗೆ ಸಿಕ್ಕಿಬಿದ್ದಿದ್ದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆಂಧ್ರ ಸಿಎಂ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕನ ಬಂಧನದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ರಾಜಕೀಯ ಸಿದ್ಧಾಂತಕ್ಕೆ ಮೋಸ ಮಾಡಿದ್ದಾರೆ ಮತ್ತು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಗೋದಾವರಿ ಜಿಲ್ಲೆಯ ನಿಡದವೋಲುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಜಗನ್, ದುರದೃಷ್ಟವಶಾತ್, ನಾಯ್ಡು ಅವರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪುರಾವೆಗಳಿದ್ದರೂ, ಪ್ರಭಾವಿ ಗ್ಯಾಂಗ್ ಅವರ ಸಹಚರರಾಗಿದ್ದು, ಅವರನ್ನು ಉಳಿಸಲು ಪ್ರಯತ್ನಿಸುತ್ತಿದೆ. ಆದರೆ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಇಂದು, ಪ್ರಭಾವಿ ವ್ಯಕ್ತಿಗಳಿಗೆ ಮತ್ತು ಸಾಮಾನ್ಯ ಜನರಿಗೆ ಕಾನೂನು ಒಂದೇ ಎಂದು ಪ್ರತಿಪಾದಿಸಿದ ಸಿಎಂ, ನಾಯ್ಡು ಅವರ ಆಪ್ತರಿಗೆ ಈ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ದ್ವೇಷ ಭಾಷಣ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಬಂಧನ ವಾರಂಟ್ ಜಾರಿ

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!