ಸಿಡಬ್ಲ್ಯುಸಿ ಸಭೆ 
ದೇಶ

ಸನಾತನ ಧರ್ಮ ವಿವಾದ ಪಕ್ಷಕ್ಕೆ ಹಾನಿಕರ, ಜನಸಾಮಾನ್ಯರ ವಿಷಯ ಪ್ರಸ್ತಾಪಿಸಿ: ಕಾಂಗ್ರೆಸ್ ನಾಯಕರು

ಇಂಡಿಯಾ (INDIA) ಮೈತ್ರಿಕೂಟದಲ್ಲಿರುವ ಡಿಎಂಕೆ ಸನಾತನ ಧರ್ಮದ ವಿರುದ್ಧ ಮಾತನಾಡಿರುವುದು ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಈ ಬಗ್ಗೆ ಪಕ್ಷದ ನಾಯಕರು ಎಚ್ಚರ ವಹಿಸಲು ಮುಂದಾಗಿದ್ದಾರೆ. 

ನವದೆಹಲಿ: ಇಂಡಿಯಾ (INDIA) ಮೈತ್ರಿಕೂಟದಲ್ಲಿರುವ ಡಿಎಂಕೆ ಸನಾತನ ಧರ್ಮದ ವಿರುದ್ಧ ಮಾತನಾಡಿರುವುದು ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಈ ಬಗ್ಗೆ ಪಕ್ಷದ ನಾಯಕರು ಎಚ್ಚರ ವಹಿಸಲು ಮುಂದಾಗಿದ್ದಾರೆ. 

ಈ ವಿಷಯವಾಗಿ ಜಾಗರೂಕತೆಯಿಂದ ಹೇಳಿಕೆ ನೀಡಬೇಕೆಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದಾರೆ. ಸನಾತನ ಧರ್ಮದ ವಿಷಯದಲ್ಲಿ ಪಕ್ಷ ಹಾಗೂ ಮಿತ್ರ ಪಕ್ಷಗಳು ನೀಡುವ ಹೇಳಿಕೆ ಬಿಜೆಪಿಯ ಅಜೆಂಡಾಗಳಿಗೆ ಬಲಿಯಾಗಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ.

ಸನಾತನ ಧರ್ಮದ ಕುರಿತ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ಚತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ ಸಿಂಗ್ಮ್ ಅವರು, ಸನಾತನ ಧರ್ಮದ ವಿಷಯದ ಕುರಿತ ಹೇಳಿಕೆಗಳಿಂದ ಸಾಧ್ಯವಾದಷ್ಟೂ ಅಂತರ ಕಾಯ್ದುಕೊಳ್ಳಬೇಕು ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಜನಸಾಮಾನ್ಯರ ವಿಷಯ ಪ್ರಸ್ತಾಪಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ರಾಹುಲ್ ಗಾಂಧಿ ಸಹ ಇದೇ ರೀತಿಯ ಅಭಿಪ್ರಾಯ ನೀಡಿದ್ದು, ಪಕ್ಷದ ಸಾಂಪ್ರದಾಯಿಕ ಮತ ಬ್ಯಾಂಕ್ ಆಗಿರುವ ಬಡವರ, ಹಿಂದುಳಿದ ಸಮುದಾಯಗಳ ಕುರಿತ ವಿಷಯಗಳನ್ನು ಹೆಚ್ಚು ಪ್ರಸ್ತಾಪಿಸುವಂತೆ ಸಲಹೆ ನೀಡಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹೆಚ್ಚಿನ ಹಾನಿಯುಂಟುಮಾಡಲಿದ್ದು, ಬಿಜೆಪಿಗೆ ಹೆಚ್ಚಿನ ಪ್ರಮಾಣದಲ್ಲಿ ಲಾಭ ಮಾಡಿಕೊಡಲಿದೆ ಎಂದು ಬಘೇಲ್ ಹಾಗೂ ದಿಗ್ವಿಜಯ ಸಿಂಗ್ ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ