ನೂತನ ಸಂಸತ್ ಕಟ್ಟಡದಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್. 
ದೇಶ

ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಸೋಮವಾರದಿಂದ ಆರಂಭವಾಗುವ ವಿಶೇಷ ಅಧಿವೇಶನ ಕಲಾಪಗಳು ನೂತನ ಕಟ್ಟಡದಲ್ಲೇ ನಡೆಯಲಿವೆ. ಧ್ವಜಾರೋಹಣ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು.

ಸಮಾರಂಭದ ನಂತರ ಮಾತನಾಡಿದ ಉಪರಾಷ್ಟ್ರಪತಿಗಳು,​ "ಭಾರತ ಯುಗಾಂತರದ ಬದಲಾವಣೆಗೆ ಸಾಕ್ಷಿಯಾಗಿದೆ. ಇಡೀ ವಿಶ್ವವೇ ಭಾರತದ ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುತ್ತಿದೆ. ನಾವು ಅದ್ಭುತ ಅಭಿವೃದ್ಧಿ, ಸಾಧನೆಗಳನ್ನು ನೋಡುತ್ತಿರುವ ಕಾಲದಲ್ಲಿ ಬದುಕುತ್ತಿದ್ದೇವೆ ಎಂದು ಹೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ, ಕೇಂದ್ರ ಸಚಿವರಾದ ವಿ.ಮುರಳೀಧರನ್, ಪಿಯೂಷ್ ಗೋಯಲ್, ಅರ್ಜುನ್ ರಾಮ್ ಮೇಘವಾಲ್, ಕಾಂಗ್ರೆಸ್ ಸಂಸದರಾದ ಅಧೀರ್ ರಂಜನ್ ಚೌಧರಿ ಮತ್ತು ಪ್ರಮೋದ್ ತಿವಾರಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶನಿವಾರ ತಿಳಿಸಿದ್ದರು. ಇದೇ ವೇಳೆ, ತನಗೆ ಸಾಕಷ್ಟು ತಡವಾಗಿ ಆಹ್ವಾನ ಬಂದಿದ್ದಾಗಿ ಹೇಳಿದ್ದರು. ರಾಜ್ಯಸಭೆ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು ಖರ್ಗೆ ಪತ್ರ ಬರೆದಿದ್ದರು.

ಸೆಪ್ಟೆಂಬರ್ 15ರ ಸಂಜೆ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಸಂಸತ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ನಿಮ್ಮ ಆಹ್ವಾನವನ್ನು ನಾನು ಸೆಪ್ಟೆಂಬರ್ 15, 2023 ರಂದು ಸಂಜೆ ತಡವಾಗಿ ಸ್ವೀಕರಿಸಿದ್ದೇನೆ ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT