ಹೆಚ್ ಡಿ ದೇವೇಗೌಡ 
ದೇಶ

ಕಾವೇರಿ ವಿವಾದ: ಪರಸ್ಪರ ಮಾತುಕತೆ ಮೂಲಕ ಮಾತ್ರ ಪರಿಹರಿಸಲು ಸಾಧ್ಯ- ಹೆಚ್. ಡಿ. ದೇವೇಗೌಡ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ರಾಜ್ಯಸಭೆಯಲ್ಲಿ 'ಸಂವಿಧಾನ ಸಭೆಯಿಂದ ಆರಂಭವಾದ 75 ವರ್ಷಗಳ ಸಂಸತ್ತಿನ ಪಯಣ-- ಸಾಧನೆ, ಅನುಭವ, ನೆನಪುಗಳು ಮತ್ತು ಕಲಿಕೆ' ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಗೌಡರು, ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ .ನೆರೆಯ ರಾಜ್ಯದ ಕೆಲವು ಗೆಳೆಯರು ಕಾವೇರಿ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ.  ಕಳೆದ 60 ವರ್ಷಗಳಿಂದ ಈ ಸಮಸ್ಯೆ ಇದ್ದು,  ಕಾನೂನಾತ್ಮಕವಾಗಿ ಬಗೆಹರಿಯುವುದಿಲ್ಲ ಎಂದರು. 

"ನಮ್ಮ ಸ್ನೇಹಿತರು ಸುಗಮ ರೀತಿಯ ಸಮಸ್ಯೆ ಪರಿಹರಿಸಲು ಬಯಸಿದರೆ, ನಾವೆಲ್ಲರೂ ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸೋಣ ಇಲ್ಲದಿದ್ದರೆ ವಿವಾದ ಮುಂದುವರಿಯುತ್ತದೆ ಮತ್ತು ಎರಡೂ ಕಡೆಯಿಂದ ಹೋರಾಟ ಮುಂದುವರಿಯುತ್ತದೆ. ನಾವು ಒಟ್ಟಿಗೆ ಕುಳಿತು ಬಿಕ್ಕಟ್ಟು ಬಗೆಹರಿಸಲು  ಪ್ರಯತ್ನಿಸದ ಹೊರತು ಈ ಸಮಸ್ಯೆಯನ್ನು ಪರಿಹರಿಸಲಾಗದು, ಕಾನೂನಾತ್ಮಕವಾಗಿ ಖಂಡಿತವಾಗಿಯೂ ವಿವಾದ ಬಗೆಹರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. 

ಕರ್ನಾಟಕ ರಾಜ್ಯ ಮಳೆಯಿಲ್ಲದೆ  ಬರ ಪರಿಸ್ಥಿತಿಯಿರುವುದರಿಂದ ಸಂಕಷ್ಟದಲ್ಲಿರುವ  ಜನರ ಪರ ನಿಂತಿದ್ದೇನೆ. “ಕರ್ನಾಟಕ ಅಥವಾ ತಮಿಳುನಾಡಿಗೆ ಸೇರದ ಈ ಸದನದ ಎರಡೂ ಕಡೆಯ ಐವರು ಸದಸ್ಯರನ್ನು ನೀವು ( ರಾಜ್ಯಸಭಾ ಸದಸ್ಯ ಜಗದೀಪ್ ಧನಕರ್) ನಿಯೋಜಿಸಿ, ಅವರು ಹೋಗಿ ಜನರ ಸ್ಥಿತಿ ಏನಾಗಿದೆ ಎಂಬುದನ್ನು ನೋಡಿ ನಂತರ ಈ ಸದನಕ್ಕೆ ವರದಿ ಮಾಡಲಿ, ನಾನು ಒಪ್ಪಿಕೊಳ್ಳುತ್ತೇನೆ. ಅನಾವಶ್ಯಕವಾಗಿ ಜಗಳ ಮಾಡಿಕೊಳ್ಳುವುದು ಬೇಡ  ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT