ಆದಿತ್ಯಾ ಎಲ್ 1 ನೌಕೆ 
ದೇಶ

ಸೂರ್ಯಯಾನ: ಪಯಣದ ನಡುವೆಯೇ ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದ ಆದಿತ್ಯ-ಎಲ್ 1 ನೌಕೆ: ಇಸ್ರೋ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮೊಟ್ಟ ಮೊದಲ ಸೂರ್ಯ ಯೋಜನೆ ಆದಿತ್ಯ-ಎಲ್ 1 ನೌಕೆ ಸೂರ್ಯನತ್ತ ಪಯಣಿಸುತ್ತಲೇ ತನ್ನ ಕಾರ್ಯಾರಂಭ ಮಾಡಿದ್ದು, ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮೊಟ್ಟ ಮೊದಲ ಸೂರ್ಯ ಯೋಜನೆ ಆದಿತ್ಯ-ಎಲ್ 1 ನೌಕೆ ಸೂರ್ಯನತ್ತ ಪಯಣಿಸುತ್ತಲೇ ತನ್ನ ಕಾರ್ಯಾರಂಭ ಮಾಡಿದ್ದು, ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಹೌದು.. ಭಾರತದ ಮೊಟ್ಟ ಮೊದಲ ಸೌರ ಯೋಜನೆ​ ಆದಿತ್ಯ-ಎಲ್ 1 ನೌಕೆಯು ವೈಜ್ಞಾನಿಕ ಮಾಹಿತಿ ಸಂಗ್ರಹಿಸುವ ಕಾರ್ಯಾರಂಭಿಸಿದೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್​ ಮಾಡುವ ಮೂಲಕ ಈ ಮಾಹಿತಿ ನೀಡಿದೆ.

"ಸುಪ್ರಾ ಥರ್ಮಲ್ ಮತ್ತು ಎನರ್ಜೆಟಿಕ್ ಪಾರ್ಟಿಕಲ್ ಸ್ಪೆಕ್ಟ್ರೋಮೀಟರ್ ಉಪಕರಣದ ಸಂವೇದಕಗಳು ಭೂಮಿಯಿಂದ 50,000 ಕಿ.ಮೀಗಿಂತಲೂ ಹೆಚ್ಚು ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿವೆ. ಈ ದತ್ತಾಂಶವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನು ವಿಶ್ಲೇಷಿಸಲು ಸಹಾಯ ಮಾಡುತ್ತವೆ. ಅಂಕಿಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನು ತೋರಿಸುತ್ತದೆ ಎಂದು ಇಸ್ರೋ ತಿಳಿಸಿದೆ."

ಆದಿತ್ಯ-ಎಲ್ 1 ಕಕ್ಷೆಗೇರಿಸುವ 4ನೇ ಪ್ರಕ್ರಿಯೆ ಕೂಡ ಯಶಸ್ವಿ
ಆದಿತ್ಯ-ಎಲ್ 1 ನೌಕೆಯನ್ನು ಎತ್ತರದ ಕಕ್ಷೆಗೆ ಏರಿಸುವ 4ನೇ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇತ್ತೀಚೆಗೆ ಹೇಳಿತ್ತು. ಬೆಂಗಳೂರಿನ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಈ ಕಾರ್ಯಾಚರಣೆ ನಡೆಸಲಾಗಿತ್ತು.  ಸದ್ಯ ಆದಿತ್ಯ ನೌಕೆಯು ಭೂಮಿಯಿಂದ 256 ಕಿ.ಮೀ x 121973 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಿಸುತ್ತಿದೆ. ಈ ಕಾರ್ಯಾಚರಣೆಯನ್ನು ಬೆಂಗಳೂರು, ಮಾರಿಷಸ್, ಎಸ್‌ಡಿಎಸ್‌ಸಿ-ಎಸ್​ಹೆಚ್ಎಆರ್ ಮತ್ತು ಪೋರ್ಟ್ ಬ್ಲೇರ್‌ನಲ್ಲಿರುವ ಇಸ್ರೆೋ ಕೇಂದ್ರಗಳಲ್ಲಿ ಟ್ರ್ಯಾಕ್ ಮಾಡಲಾಗುತ್ತಿದೆ.

ಹಾಗೆಯೇ ಮುಂದಿನ (5ನೇ) ಹಂತದ ಕಕ್ಷೆ ಬದಲಾವಣೆ ಕಾರ್ಯ ಸೆಪ್ಟೆಂಬರ್‌ 19ರಂದು ನಿಗದಿಯಾಗಿದೆ. ಇದಕ್ಕೂ ಮೊದಲು ಸೆ.5ರಂದು ಆದಿತ್ಯ-ಎಲ್​ 1, 2ನೇ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿತ್ತು. ಅದು ಭೂಮಿಯಿಂದ 282 ಕಿ.ಮೀ x 40225 ಕಿ.ಮೀ ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸಿತ್ತು ಎಂದು ಇಸ್ರೋ ತಿಳಿಸಿತ್ತು.

ಇಸ್ರೋ ಸೆ.2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ-ಎಲ್‌1 ಉಡ್ಡಯನ ಮಾಡಿತ್ತು. ಇದು 7 ವಿಭಿನ್ನ ಪೇಲೋಡ್‌ಗಳನ್ನು ನಭಕ್ಕೆ ಹೊತ್ತೊಯ್ದಿದೆ. ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ-ಎಲ್ 1 ಅಂತರಿಕ್ಷ ವೀಕ್ಷಣಾಲಯವನ್ನು ಇರಿಸಲಾಗುತ್ತದೆ. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT