ಪ್ರಜ್ವಲ್ ರೇವಣ್ಣ 
ದೇಶ

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರಿಂ ಕೋರ್ಟ್!

ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ನವದೆಹಲಿ: ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ತಡೆಯಾಜ್ಞೆ ನೀಡಿದೆ. ಆದರೆ ಪ್ರಜ್ವಲ್ ಅವರು ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಬಹುದಾದರೂ ಸಂಸದರಾಗಿ ಮತ ಚಲಾಯಿಸಲು ಮತ್ತು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಪೀಠ ಹೇಳಿದೆ.

ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಕೆಕೆ ವೇಣುಗೋಪಾಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ನೀಡಿದೆ.

ಚುನಾವಣಾ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಬಾಲಾಜಿ ಶ್ರೀನಿವಾಸನ್ ವಾದ ಮಂಡಿಸಿದರು. ನಿಯಮಗಳು ಮತ್ತು ಕಾರ್ಯವಿಧಾನಗಳ ವಿರುದ್ಧ ತನ್ನ ನಿರ್ಧಾರಕ್ಕೆ ಬರಲು ಇತರ ಕಾರಣಗಳ ನಡುವೆ ಹೈಕೋರ್ಟ್ ತನ್ನ ವಿರುದ್ಧ ಸಲ್ಲಿಸಲಾದ ಎರಡು ಪ್ರತ್ಯೇಕ ಚುನಾವಣಾ ಅರ್ಜಿಗಳನ್ನು ಕ್ರೋಢೀಕರಿಸಿದೆ ಎಂದು ಪ್ರಜ್ವಲ್ ತನ್ನ ಮನವಿಯಲ್ಲಿ ಪ್ರತಿಪಾದಿಸಿದ್ದಾರೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಜ್ವಲ್ ಅವರ ಚುನಾವಣಾ ಅಫಿಡವಿಟ್‌ನಲ್ಲಿ ಅವರ ಆಸ್ತಿ ಸೇರಿದಂತೆ ಸಂಪೂರ್ಣ ಅಗತ್ಯವಿರುವ ವಿವರಗಳನ್ನು ಬಹಿರಂಗಪಡಿಸದ ಕಾರಣ 2019ರ ಚುನಾವಣೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಹೈಕೋರ್ಟ್ ಘೋಷಿಸಿತು. ನ್ಯಾಯಮೂರ್ತಿ ಕೆ ನಟರಾಜನ್ ಅವರು ಅಂದಿನ ಬಿಜೆಪಿ ಅಭ್ಯರ್ಥಿ ಮತ್ತು ಈಗ ಜೆಡಿಎಸ್ ಶಾಸಕ ಎ ಮಂಜು ಮತ್ತು ಇನ್ನೊಬ್ಬರು ಸಲ್ಲಿಸಿದ್ದ ಚುನಾವಣಾ ಅರ್ಜಿಗಳ ಮೇಲೆ ತೀರ್ಪು ನೀಡಿದ್ದರು.

2019ರ ಮೇ 23ರಂದು ಪ್ರಜ್ವಲ್ 6,76,606 ಮತಗಳನ್ನು ಗಳಿಸಿ ವಿಜಯಿ ಎಂದು ಘೋಷಿಸಲಾಯಿತು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ. ಮಂಜು 5,35,282 ಮತಗಳನ್ನು ಪಡೆದು ಪರಾಜಿತರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT