ದೇಶ

'ಡ್ರೈ' ಬಿಹಾರದಲ್ಲಿ ಮದ್ಯ ಮಾರಾಟ ಮಾಡಿದ SHO ಸೇರಿ ಆರು ಪೊಲೀಸರ ಅಮಾನತು

Lingaraj Badiger

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಠಾಣಾಧಿಕಾರಿ(ಎಸ್‌ಎಚ್‌ಒ) ಸೇರಿದಂತೆ ಆರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಬಿಹಾರದಲ್ಲಿ ಏಪ್ರಿಲ್ 2016 ರಿಂದ ಸಂಪೂರ್ಣ ಮದ್ಯಪಾನ ನಿಷೇಧಿಸಲಾಗಿದೆ.

ಬಕ್ಸರ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಮನೀಶ್ ಕುಮಾರ್ ಅವರು ಪೊಲೀಸ್ ಠಾಣೆ ಆವರಣದಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಎಸ್‌ಎಚ್‌ಒ ಮತ್ತು ಇತರ ಐವರು ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ತಪ್ಪಿತಸ್ಥ ಪೊಲೀಸರ ವಿರುದ್ಧ ಬಿಹಾರ ಅಬಕಾರಿ ಮತ್ತು ನಿಷೇಧ ಕಾಯ್ದೆ 2016 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮನೀಶ್ ಅವರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಬ್ಬಂದಿ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ರಚಿಸಲಾದ ಪೊಲೀಸ್ ತಂಡ ಸಲ್ಲಿಸಿದ ವಿವರವಾದ ವರದಿಯನ್ನು ಅನುಸರಿಸಿ ಕ್ರಮ ಕೈಗೊಳ್ಳಲಾಗಿದೆ. 

ಇತ್ತೀಚೆಗೆ ಬ್ರಹ್ಮಪುರ ಪೊಲೀಸರು ಮದ್ಯದ ಪೆಟ್ಟಿಗೆಗಳನ್ನು ಸಾಗಿಸುತ್ತಿದ್ದ ಕಂಟೈನರ್ ಅನ್ನು ವಶಪಡಿಸಿಕೊಂಡಿದ್ದರು. ವಶಪಡಿಸಿಕೊಂಡ ಮದ್ಯದ ಕೆಲವು ಪೆಟ್ಟಿಗೆಗಳನ್ನು ಮತ್ತೊಂದು ಕೋಣೆಯಲ್ಲಿ ದಾಸ್ತಾನು ಮಾಡಿ ಮಾರಾಟ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT