ಅತಿಶಿ 
ದೇಶ

ಇದು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ದೆಹಲಿ ಸಚಿವೆ ಅತಿಶಿ

ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ...

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಕಳೆದ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಗೆ ಮರು ಜೀವ ನೀಡಲಾಗಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಸೂದೆಯ ನಿಬಂಧನೆಗಳನ್ನು ಸೂಕ್ಷ್ಮವಾಗಿ ಓದಿದರೆ ಅದು 'ಮಹಿಳಾ ಬೇವಕೂಫ್ ಬನಾವೋ' ಮಸೂದೆ ಎಂದು ತೋರಿಸುತ್ತದೆ" ಎಂದು ಎಎಪಿ ನಾಯಕಿ ಕಿಡಿ ಕಾರಿದ್ದಾರೆ.

"ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ಏಕೆ ಸೇರಿಸಲಾಗಿದೆ? ಇದರರ್ಥ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಹಿಳಾ ಮೀಸಲಾತಿ ಜಾರಿಗೊಳಿಸಲಾಗುವುದಿಲ್ಲ. ನಾವು ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ತೆಗೆದು ಹಾಕಬೇಕು ಮತ್ತು  2024 ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ" ಎಂದು ದೆಹಲಿ ಸಚಿವೆ ಅತಿಶಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ