ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಹೊಸ ಸಂಸತ್ ಭವನದ ಕಡೆಗೆ ನಡೆದರು. 
ದೇಶ

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ 'ಜಾತ್ಯತೀತ', 'ಸಮಾಜವಾದಿ' ಪದಗಳು ನಾಪತ್ತೆ: ಅಧೀರ್ ರಂಜನ್ ಚೌಧರಿ

ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸದಸ್ಯರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸದಸ್ಯರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ.

ಆದಾಗ್ಯೂ, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಾತನಾಡಿ, ಸಂವಿಧಾನದ ಪ್ರಸ್ತಾವನೆಯು ಮೂಲ ಆವೃತ್ತಿಯನ್ನು ಹೊಂದಿದ್ದು, ಸಂವಿಧಾನಾತ್ಮಕ ತಿದ್ದುಪಡಿಗಳ ನಂತರ ಈ ಉಲ್ಲೇಖಿತ ನಿರ್ದಿಷ್ಟ ಪದಗಳನ್ನು ಸೇರಿಸಲಾಯಿತು. ಮೂಲಭೂತವಾಗಿ, ತಿದ್ದುಪಡಿ ಪ್ರಕ್ರಿಯೆಯ ಮೂಲಕ ಸಂವಿಧಾನದ ಪ್ರಸ್ತಾವನೆಗೆ ಸೇರಿಸಲಾದ ಹೆಚ್ಚುವರಿ ಪದಗಳನ್ನು ಈ ಪ್ರತಿಗಳು ಒಳಗೊಂಡಿಲ್ಲ ಎಂದು ಹೇಳಿದರು.

'ಇದು ಸಂವಿಧಾನದ ಮೂಲ ಪ್ರಸ್ತಾವನೆಯ ಪ್ರಕಾರವಾಗಿದೆ. ತಿದ್ದುಪಡಿಗಳನ್ನು ನಂತರ ಮಾಡಲಾಗಿದೆ' ಎಂದು ಅವರು ಪ್ರತಿಪಾದಿಸಿದರು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಚೌಧರಿ, ಈ ಪದಗಳನ್ನು 'ಜಾಣತನದಿಂದ ತೆಗೆದುಹಾಕಲಾಗಿದೆ' ಎಂದು ದೂರಿದ ಅವರು, ಬಿಜೆಪಿ ಸರ್ಕಾರದ ಉದ್ದೇಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

'ನಾವು ಹೊಸ ಸಂಸತ್ ಕಟ್ಟಡಕ್ಕೆ ಕೊಂಡೊಯ್ದ ಸಂವಿಧಾನದ ಪ್ರಸ್ತಾವನೆಯ ಪ್ರತಿಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಎನ್ನುವ ಪದಗಳಿಲ್ಲ. ಅವುಗಳನ್ನು ಜಾಣತನದಿಂದ ತೆಗೆದುಹಾಕಲಾಗಿದೆ. ಇದು ಗಂಭೀರ ವಿಷಯ ಮತ್ತು ನಾವು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಈ ಪದಗಳನ್ನು 1976ರಲ್ಲಿ ಸಂವಿಧಾನಕ್ಕೆ ಸೇರಿಸಲಾಯಿತು ಎಂಬುದು ನನಗೆ ತಿಳಿದಿದೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

'ಇದು ಗಂಭೀರ ಸಮಸ್ಯೆಯಾಗಿದೆ. ಅವರ ಹೃದಯದಲ್ಲಿ ಈ ಬಗ್ಗೆ ಸ್ಪಷ್ಟವಾಗಿಲ್ಲದ ಕಾರಣ ನಾನು ಅವರ ಉದ್ದೇಶಗಳ ಬಗ್ಗೆ ಅನುಮಾನಿಸುತ್ತೇನೆ. ಯಾರಿಗಾದರೂ ಸಂವಿಧಾನದ ಪ್ರತಿಯನ್ನು ನೀಡುವುದೇ ಆದರೆ, ಅದನ್ನು ಇಂದಿನ ಆವೃತ್ತಿಯಲ್ಲಿರುವಂತೆಯೇ ನೀಡಬೇಕು' ಎಂದು ಹೇಳಿದರು.

ಸಿಪಿಐ-ಎಂನ ಬಿನೋಯ್ ವಿಶ್ವಂ ಅವರು ಸಂವಿಧಾನದ ಪ್ರಸ್ತಾವನೆಯಿಂದ ಈ ಪದಗಳನ್ನು ತೆಗೆದುಹಾಕುವುದು 'ಅಪರಾಧ' ಎಂದು ಬಣ್ಣಿಸಿದ್ದಾರೆ. ಎಡಪಕ್ಷಗಳು ಮತ್ತು ಇತರ ಪಕ್ಷಗಳು ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT