ಸಂಗ್ರಹ ಚಿತ್ರ 
ದೇಶ

ಛತ್ತೀಸ್‌ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆ

ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ.

ದಾಂತೇವಾಡ(ಛತ್ತೀಸ್‌ಗಢ): ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ. 

ರಾಜ್ಯ ಪೊಲೀಸ್ ಘಟಕದ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಅರನ್‌ಪುರ ಪೊಲೀಸ್ ಠಾಣೆಯ ಅರಣ್ಯ ವ್ಯಾಪ್ತಿಯಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಂತೇವಾಡ-ಸುಕ್ಮಾ ಅಂತರಜಿಲ್ಲಾ ಗಡಿಯಲ್ಲಿರುವ ನಗರಂ-ಪೊರೊ ಹಿರ್ಮಾ ಅರಣ್ಯದ ಬಳಿ ನಿಷೇಧಿತ ಸಂಘಟನೆಯ ದರ್ಭಾ ವಿಭಾಗದ ನಕ್ಸಲೀಯರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಗಸ್ತು ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ, ಎರಡೂ ಕಡೆಯವರ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಗುಂಡಿನ ದಾಳಿ ನಿಂತ ನಂತರ ಇಬ್ಬರು ಮಹಿಳಾ ನಕ್ಸಲೀಯರ ಮೃತದೇಹಗಳು ಹಾಗೂ ಒಂದು INSAS ರೈಫಲ್ ಮತ್ತು 12 ಬೋರ್ ರೈಫಲ್ ಅನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ನಕಾರ; 'ಯುದ್ಧ ನಿಲ್ಲಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿಲ್ಲ': ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಪಾಕಿಸ್ತಾನ!

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

SCROLL FOR NEXT