ರಾಷ್ಟ್ಪಪತಿ ದ್ರೌಪದಿ ಮುರ್ಮು 
ದೇಶ

ಲಿಂಗ ಸಮಾನತೆ ನ್ಯಾಯಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಏಷ್ಯಾ ಪೆಸಿಫಿಕ್‌ನ ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳ (ಎನ್‌ಎಚ್‌ಆರ್‌ಐ) ದ್ವೈವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮುರ್ಮು ಮಾತನಾಡಿದರು. ಈ ವೇಳೆ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಐತಿಹಾಸಿಕ ಕ್ರಮವಾಗಿದ್ದು. ಲಿಂಗ ಸಮಾನತೆಗಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿಯಾಗಿದೆ ಎಂದು ಬಣ್ಣಿಸಿದ್ದಾರೆ.

ನಾವು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಕನಿಷ್ಠ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದೇವೆ... ಇನ್ನೊಂದು ಸಂತಸದ ಕಾಕತಾಳೀಯ ಸಂಗತಿಯೆಂದರೆ, ರಾಜ್ಯ ವಿಧಾನಸಭೆಗಳು ಮತ್ತು ದೇಶದ ಸಂಸತ್ತಿನಲ್ಲಿ ಮಹಿಳೆಯರಿಗೆ ಇದೇ ರೀತಿಯ ಮೀಸಲಾತಿ ಒದಗಿಸುವ ಪ್ರಸ್ತಾವನೆಯನ್ನು ಈಗ ಮಂಡಿಸಲಾಗಿದೆ. ಇದು ನಮ್ಮ ಕಾಲದ ಲಿಂಗ ನ್ಯಾಯಕ್ಕಾಗಿ ಅತ್ಯಂತ ಪರಿವರ್ತಕ ಕ್ರಾಂತಿಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಏಷ್ಯಾ ಪೆಸಿಫಿಕ್ ಫೋರಮ್ (APF) ಸಹಯೋಗದೊಂದಿಗೆ ಸೆಪ್ಟೆಂಬರ್ 20-ರಿಂದ 21 ರವರೆಗೆ 2 ದಿನಗಳ ಸಮ್ಮೇಳನವನ್ನು ಆಯೋಜಿಸುತ್ತಿದೆ. ಭಾರತ ಮತ್ತು ವಿದೇಶಗಳಿಂದ 1,300 ಕ್ಕೂ ಹೆಚ್ಚು ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿದ್ದಾರೆ.  ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳ ಜಾಗತಿಕ ಒಕ್ಕೂಟದ ಕಾರ್ಯದರ್ಶಿ ಅಮಿನಾ ಬೋಯಾಚ್, ಎಪಿಎಫ್ ಅಧ್ಯಕ್ಷ ಡೂ-ಹ್ವಾನ್ ಸಾಂಗ್ ಮತ್ತು ಎನ್‌ಎಚ್‌ಆರ್‌ಸಿ ಅಧ್ಯಕ್ಷ ಅರುಣ್ ಕುಮಾರ್ ಮಿಶ್ರಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸದಸ್ಯ ರಾಷ್ಟ್ರಗಳ ಸಾಮಾನ್ಯ ಹಿತಾಸಕ್ತಿಯ ಸಮಸ್ಯೆಗಳನ್ನು ಚರ್ಚಿಸಲು APF ತನ್ನ 28 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಬುಧವಾರ ನಡೆಸಲಿದೆ ಎಂದು NHRC ಈ ಹಿಂದೆ ಹೇಳಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ರಾಜ್ಯ ಮಾನವ ಹಕ್ಕುಗಳ ಆಯೋಗಗಳು ಮತ್ತು ದೇಶದಲ್ಲಿ ಮಾನವ ಹಕ್ಕುಗಳ ರಕ್ಷಣೆಯಲ್ಲಿ ತೊಡಗಿರುವ ವಿವಿಧ ಸಂಸ್ಥೆಗಳು ಹಾಗೂ ವಿವಿಧ ದೇಶಗಳ ಎನ್‌ಎಚ್‌ಆರ್‌ಐಗಳ ಹಿರಿಯ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಅಂದಹಾಗೆ ಮಹಿಳಾ ಮೀಸಲಾತಿ ಮಸೂದೆ ಮಂಗಳವಾರ ಹೊಸ ಸಂಸತ್ ಭವನದಲ್ಲಿ ಮಂಡಿಸಿದ ಮೊದಲ ಮಸೂದೆಯಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT