ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: 1,159 ದರೋಡೆಕೋರರ ಅಡಗುತಾಣಗಳ ಮೇಲೆ ಪೊಲೀಸ್ ದಾಳಿ, 30 ಮಂದಿ ವಶಕ್ಕೆ

ಪಂಜಾಬ್‌ನಲ್ಲಿ ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ.

ಚಂಡೀಘಡ: ಪಂಜಾಬ್‌ನಲ್ಲಿ ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, 30 ಮಂದಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರ ನಿರ್ದೇಶನದ ಮೇರೆಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಇದರಲ್ಲಿ ವಿವಿಧ ದರೋಡೆಕೋರರೊಂದಿಗೆ ಸಂಪರ್ಕ ಹೊಂದಿರುವ ಎಲ್ಲಾ ದರೋಡೆಕೋರರು ಮತ್ತು ಅವರ ಸಂಬಂಧಿಕರು, ಸ್ನೇಹಿತರ ಮನೆಗಳು ಮತ್ತಿತರ ಕಡೆಗಳಲ್ಲಿ ಸಂಪೂರ್ಣವಾಗಿ ಶೋಧಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಅಧಿಕೃತ ಹೇಳಿಕೆ ತಿಳಿಸಿದೆ.

ಈ ದಾಳಿ ಕುರಿತು ಮಾತನಾಡಿದ ವಿಶೇಷ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅರ್ಪಿತ್ ಶುಕ್ಲಾ, ಭಾರತ ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧಕ್ಕೆ ಅಡ್ಡಿಯನ್ನುಂಟು ಮಾಡುವ ಗುರಿಯೊಂದಿಗೆ ಈ ದಾಳಿ ನಡೆಸಲಾಗಿದೆ. ಯಶಸ್ವಿ ದಾಳಿಗಾಗಿ ಸಾಕಷ್ಟು ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು  ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ತಿಳಿಸಿದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT