ಮಿರ್ವೈಜ್ ಫಾರೂಕ್ 
ದೇಶ

ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ

4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್‌ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಶ್ರೀನಗರ: 4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್‌ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಸಂವಿಧಾನದ 370ನೇ ವಿಧಿಯಡಿ ಈ ಹಿಂದಿನ ಜಮ್ಮು–ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 2019ರಲ್ಲಿ ಮಿರ್ವೈಜ್ ಫಾರೂಕ್ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಗೃಹ ಬಂಧನದಲ್ಲಿಸಿದ್ದರು. ನಾಲ್ಕು ವರ್ಷಗಳ ಬಳಿಕ ಫಾರೂಕ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಗೃಹಬಂಧನದಿಂದ ಮುಕ್ತರಾದ ನಂತರ ಫಾರೂಕ್ ಅವರು, ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

‘ಮಿರ್ವೈಜ್‌ ಅವರ ನಿವಾಸಕ್ಕೆ ಗುರುವಾರ ಸಂಜೆ ಭೇಟಿ ನೀಡಿದ ಅಧಿಕಾರಿಗಳು, ಗೃಹಬಂಧನದಿಂದ ಮುಕ್ತಗೊಳಿಸುತ್ತಿರುವ ವಿಚಾರವನ್ನು ತಿಳಿಸಿದ್ದರು. ಇದರಂತೆ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ನಡೆಯಲಿರುವ ಪಾರ್ಥನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು