ಶಾಪಿಂಗ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ 
ದೇಶ

ಮುಂಬೈ: ಓಶಿವಾರದ ಶಾಪಿಂಗ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ರಕ್ಷಣೆ

ಮುಂಬೈನ ಉಪನಗರ ಓಶಿವಾರದಲ್ಲಿರುವ ಹಿರಾ ಪನ್ನಾ ಮಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಉಪನಗರ ಓಶಿವಾರದಲ್ಲಿರುವ ಹಿರಾ ಪನ್ನಾ ಮಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 3.10ರ ಸುಮಾರಿಗೆ ಓಶಿವಾರಾ ಪೊಲೀಸ್ ಠಾಣೆ ಸಮೀಪವಿರುವ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಂತಸ್ತಿನ ಕಟ್ಟಡದಿಂದ ಮಹಿಳೆ ಸೇರಿದಂತೆ ಕನಿಷ್ಠ 14 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಮೂವರು ಸಿಬ್ಬಂದಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

12 ಅಗ್ನಿಶಾಮಕ ಇಂಜಿನಿಯರ್ ಗಳು ಸೇರಿದಂತೆ 25 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿಲ್ಲವಾದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

Dharmasthala case: ಅಕ್ಟೋಬರ್ ಅಂತ್ಯದೊಳಗೆ ಎಸ್‌ಐಟಿ ತನಿಖಾ ವರದಿ ಸಲ್ಲಿಸುವ ಸಾಧ್ಯತೆ; ಜಿ ಪರಮೇಶ್ವರ

ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? ದೇಶವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ; ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ರಾಜ್ಯಗಳಿಗೆ 'ಸುಪ್ರೀಂ' ಛೀಮಾರಿ

ಬೆಂಗಳೂರು: ಖಾಸಗಿ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 48 ಕೋಟಿ ರೂ. ವಂಚನೆ; ಇಬ್ಬರ ಬಂಧನ

Karur stampede: 10 ದಿನಗಳಲ್ಲಿ ಎಸ್‌ಒಪಿ ರೂಪಿಸಲು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ

SCROLL FOR NEXT