ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸನಾತನ ಧರ್ಮದ ಕುರಿತು ಹೇಳಿಕೆ: ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್

ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಮಾಡಿದೆ.

ಉದಯನಿಧಿ ಸ್ಟಾಲಿನ್
Srinivasa Murthy VN
Updated On : 22 Sept 2023, 2:47 pm

ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಮಾಡಿದೆ.

ಸನಾತನ ಧರ್ಮದ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ಮಾಜಿ ಸಂಸದ ಎ ರಾಜಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಸನಾತನ ಧರ್ಮದ ಹೇಳಿಕೆ ವಿಚಾರವಾಗಿ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

Advertisement

Advertisement

ಇದನ್ನೂ ಓದಿ: ಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್

ಈ ಹಿಂದೆ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು, ‘‘ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೊನಾ, ಡೆಂಗೆ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು’’ ಎಂದು ಕರೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement