ದೇಶ

ಬಹುಕಾಲದ ಶಂಕಿತ ರಹಸ್ಯ ಬಯಲಾಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ನಾಯಕ ಪಿ ಚಿದಂಬರಂ

Ramyashree GN

ನವದೆಹಲಿ: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬಹುಕಾಲದ ಶಂಕಿತ ರಹಸ್ಯವೊಂದು ಕೊನೆಗೂ ಹೊರಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ದೀರ್ಘಕಾಲದ ಶಂಕಿತ ರಹಸ್ಯ ಹೊರಬಿದ್ದಿದೆ. ಬಿಜೆಪಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಎನ್‌ಡಿಎಗೆ ಸ್ವಾಗತಿಸಿದೆ. ಈ ವರ್ಗಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡಲು ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಬಲಪಡಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಈ ನಡೆಯನ್ನು ಕರ್ನಾಟಕದ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಗಮನಿಸಬೇಕು' ಎಂದಿದ್ದಾರೆ.

ಕುಮಾರಸ್ವಾಮಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಶಾ ಮತ್ತು ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ನಾಯಕರಿಂದ ಟೀಕೆಗಳು ವ್ಯಕ್ತವಾಗಿವೆ. ಜೆಡಿಎಸ್ ಶುಕ್ರವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಭಾಗವಾಯಿತು.

ನಿರ್ಣಾಯಕ 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಜೆಡಿಎಸ್ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಭಾಗವಾಗಿದೆ.

ಈ ವರ್ಷ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜೆಡಿಎಸ್ ಅನ್ನು ಸೋಲಿಸಿತ್ತು.

SCROLL FOR NEXT