ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸನಾತನ ಧರ್ಮ ಹೇಳಿಕೆ ವಿವಾದ: ಸುಪ್ರೀಂ ಕೋರ್ಟ್ ನಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್
Srinivasa Murthy VN
Updated On : 23 Sept 2023, 8:21 pm

ಚೆನ್ನೈ: ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉದಯನಿಧಿ ಸ್ಟಾಲಿನ್, 'ಸುಪ್ರೀಂ ಕೋರ್ಟ್ ನೋಟಿಸ್‌ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ, ಇದುವರೆಗೆ ಕೋರ್ಟ್‌ನಿಂದ ಪ್ರತಿಕ್ರಿಯೆ ನೀಡುವಂತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ’ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ. 

ಇದನ್ನೂ ಓದಿ: ಸನಾತನಧರ್ಮ ವಿವಾದದಲ್ಲಿ 'ಚಿಕ್ಕ ಹುಡುಗನ' ಟಾರ್ಗೆಟ್‌ ಮಾಡಿ ಬೇಟೆಯಾಡಲಾಗುತ್ತಿದೆ: ಉದಯನಿಧಿ ಪರ ಕಮಲ್‌ ಹಾಸನ್‌ ಬ್ಯಾಟಿಂಗ್!

Advertisement

Advertisement

‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ತಮಿಳುನಾಡು ಸರ್ಕಾರ ಮತ್ತು ಉದಯನಿಧಿ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ‘ಸನಾತನ ಧರ್ಮ ನಿರ್ಮೂಲನೆ ಮಾಡಬೇಕು’ ಎಂಬ ಹೇಳಿಕೆ ನೀಡಿದ ಉದಯನಿಧಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಮದ್ರಾಸ್‌ ಹೈಕೋರ್ಟ್‌ ವಕೀಲ ಬಿ.ಜಗನ್ನಾಥ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸನಾತನ ಧರ್ಮದ ಕುರಿತು ಹೇಳಿಕೆ: ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್

ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠವು ಶುಕ್ರವಾರ ಅರ್ಜಿ ವಿಚಾರಣೆ ನಡೆಸಿ ಪ್ರಕರಣ ಸಂಬಂಧ ಉದಯನಿಧಿಗೆ ನೋಟಿಸ್‌ ಜಾರಿ ಮಾಡಿತ್ತು. ‘ಸೆ.2ರಂದು ನಡೆದ ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದಲ್ಲಿ ರಾಜ್ಯದ ಸಚಿವರು ಭಾಗವಹಿಸಿರುವುದನ್ನು ‘ಅಸಾಂವಿಧಾನಿಕ’ ಎಂದು ಘೋಷಣೆ ಮಾಡಬೇಕು. ಈ ಕುರಿತು ಸಿಬಿಐ ತನಿಖೆಗೆ ಸೂಚಿಸಬೇಕು’ ಎಂದೂ ಅವರು ಅರ್ಜಿಯಲ್ಲಿ ಕೋರಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement