ಬ್ರಿಜ್ ಭೂಷಣ್ ಶರಣ್ ಸಿಂಗ್ 
ದೇಶ

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರು

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

ಅವಕಾಶ ಸಿಕ್ಕಾಗಲೆಲ್ಲಾ ಅವರು ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ. ಅಂತಹ ಯಾವುದೇ ಅವಕಾಶವನ್ನು ಅವರು ಎಂದಿಗೂ ಕಳೆದುಕೊಂಡಿಲ್ಲ ಮತ್ತು ಬಿಜೆಪಿ ಸಂಸದರ ವಿರುದ್ಧ ಈ ಆರೋಪಗಳನ್ನು ದಾಖಲಿಸಲು ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 

ಆರು ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಧಿಕೃತವಾಗಿ ಲೈಂಗಿಕ ದೌರ್ಜನ್ಯ ಆರೋಪ ಹೊರಿಸುವ ವಿಚಾರವಾಗಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಪೊಲೀಸರು ಹೇಳಿಕೆ ನೀಡಿದ್ದಾರೆ. ಪೊಲೀಸರು ಈ ಹಿಂದೆ ಬ್ರಿಜ್ ಭೂಷಣ್ ವಿರುದ್ಧ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದರು. 

ಶನಿವಾರ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಬ್ರಿಜ್ ಭೂಷಣ್ ಸಿಂಗ್‌ಗೆ ವಿನಾಯಿತಿ ನೀಡಲಾಗಿತ್ತು.

ದೆಹಲಿ ಪೊಲೀಸರು ಜೂನ್ 15 ರಂದು  ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 506 (ಅಪರಾಧ ಬೆದರಿಕೆ) ಅಡಿ ಬಿಜೆಪಿ ಸಂಸದರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 

ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT