ಸಾಂದರ್ಭಿಕ ಚಿತ್ರ 
ದೇಶ

ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ: 2 ಸಾವು, ಹಲವರು ಆಸ್ಪತ್ರೆಗೆ ದಾಖಲು!

ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾಟ್ನಾ: ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೌದು.. ಬಿಹಾರದಲ್ಲಿ ಮತ್ತೊಂದು ಶಂಕಿತ ಕಳ್ಳಬಟ್ಟಿ ದುರಂತದ ಶಂಕೆ ವ್ಯಕ್ತವಾಗಿದ್ದು, ಮುಜಾಫರ್‌ಪುರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ದೃಷ್ಟಿ ಕಳೆದುಕೊಂಡು ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್‌ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ
  
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಅವಧೇಶ್ ದೀಕ್ಷಿತ್ ಅವರು ನೀಡಿರುವ ಮಾಹಿತಿ ಪ್ರಕಾರ, ಖಾಜಿ ಮೊಹಮ್ಮದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಹಲವರ ದೃಷ್ಟಿಗೆ ಗಂಭೀರ ಹಾನಿಯಾಗಿದೆ. ತಲೆಮರೆಸಿಕೊಂಡಿರುವ ಆಪಾದಿತ ಸರಬರಾಜುದಾರನ ಪತ್ನಿ ಮತ್ತು ಮಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

"ಪೋಖಾರಿಯಾ ಪಿರ್ ಮೊಹಲ್ಲಾದಲ್ಲಿ ಉಮೇಶ್ ಸಾಹ್ (55) ಮತ್ತು ಪಪ್ಪು ರಾಮ್ ಸಾವನ್ನಪ್ಪಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ಅವರು ಮೂರು ದಿನಗಳ ಹಿಂದೆ ಕುಡಿದು ಮನೆಗೆ ಮರಳಿದ್ದರು, ಬಳಿಕ ಅನಾರೋಗ್ಯಕ್ಕೆ ಒಳಗಾಗಿದ್ದರು ಮತ್ತು ವೈದ್ಯಕೀಯ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ" ಎಂದು ದೀಕ್ಷಿತ್ ಪಿಟಿಐಗೆ ತಿಳಿಸಿದರು.

"ಇದೇ ಪ್ರದೇಶದ ನಿವಾಸಿಗಳಾದ ಧರ್ಮೇಂದ್ರ ರಾಮ್ ಮತ್ತು ರಾಜು ರಾಮ್ ಎಂಬ ಇಬ್ಬರು ದೃಷ್ಟಿ ಕಳೆದುಕೊಂಡಿದ್ದಾರೆ. ಅಕ್ರಮ ಕಳ್ಳಬಟ್ಟಿ ವ್ಯವಹಾರದಲ್ಲಿ ತೊಡಗಿರುವ ಶಿವಚಂದ್ರ ಪಾಸ್ವಾನ್ ಅವರ ಕುಟುಂಬದಿಂದ ಮದ್ಯವನ್ನು ಖರೀದಿಸಿದ್ದೇವೆ ಎಂದು ಹೇಳಿದ್ದಾರೆ. ಪಾಸ್ವಾನ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಮತ್ತು ಅವರ ಪತ್ನಿ ಮತ್ತು ಮಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಧರ್ಮೇಂದ್ರ ರಾಮ್ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಎಎಸ್ಪಿ ಹೇಳಿದರು.

ಗಮನಾರ್ಹವಾಗಿ, 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT